ಬಿಗ್ ಬಾಸ್ ಮನೆ ದಿನದಿಂದ ದಿನಕ್ಕೆ ಹಲವಾರು ರೋಚಕತೆಯಿಂದ ಕೂಡಿದೆ. 18 ಜನರೊಂದಿಗೆ ಶುರುವಾದ ಆಟ ಇದೀಗ 12 ಜನಕ್ಕೆ ಬಂದು ನಿಂತಿದೆ. ಬಿಗ್ ಬಾಸ್ ನ ಪ್ರತಿ ಸೀಸನ್ ನಂತೆ ಈ ಬಾರಿಯೂ ಸಹ ವೈಲ್ಡ್ ಕಾರ್ಡ್ ಎಂಟ್ರಿ ಇರುತ್ತದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ವೈಲ್ಡ್ ಕಾರ್ಡ್ ಎಂಟ್ರಿಯಲ್ಲಿ ಸೋನು ಶ್ರೀನಿವಾಸ್ ಗೌಡ ಬರುತ್ತಾರೆ ಎಂಬ ಮಾತಿತ್ತು. ಆದರೆ ಇದೀಗ ಸೋನು ಬದಲು ಚಕ್ರವರ್ತಿ ಚಂದ್ರಚೂಡ ಬರಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಬಿಗ್ ಬಾಸ್ ಸೀಸನ್ ನಲ್ಲಿ ಈ ಬಾರಿ ಕೂಡ ವೈಲ್ಡ್ ಕಾರ್ಡ್ ಎಂಟ್ರಿ ಇರುತ್ತದೆ. ಬಿಗ್ ಬಾಸ್ ಸೀಸನ್ 9 ಶುರುವಾಗಿ 7 ವಾರಗಳು ಕಳೆದಿದೆ. ಕೊನೆಯದಾಗಿ ಸಾನ್ಯ ಐಯ್ಯರ್ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಹೀಗಾಗಿ ಹೆಚ್ಚಾಗಿ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಯಾರು ಬರಲಿದ್ದಾರೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಹಿಂದೆ ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಯಾಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಆದರೆ ಕೆಲವೊಂದು ವೈಯಕ್ತಿಕ ಕಾರಣಗಳಿಂದ ಸೋನು ಬಿಗ್ ಬಾಸ್ ಮನೆಗೆ ಬರುವುದಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ಚಕ್ರವರ್ತಿ ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಬಿಗ್ ಬಾಸ್ ಸೀಸನ್ 8 ರಲ್ಲಿ ಚಕ್ರವರ್ತಿ ಎಲ್ಲರ ಮನೆಮಾತಾಗಿದ್ದರು. ಇವರ ಆಟದಿಂದ ಪ್ರತಿಯೊಬ್ಬರನ್ನು ಸಹ ಇವರು ರಂಜಿಸುತ್ತಿದ್ದರು. ಹೀಗಾಗಿ ಮತ್ತೆ ಬಿಗ್ ಬಾಸ್ ಸೀಸನ್ 9 ಕ್ಕೆ ಇವರು ಬರಲಿದ್ದಾರಾ ಎಂಬುದರ ಕುರಿತು ಕಾದು ನೋಡಬೇಕು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
