fbpx
ಸಮಾಚಾರ

ಸಾನಿಯಾ ಮಿರ್ಜಾ- ಶೋಯಬ್ ಮಲಿಕ್ ಸಂಸಾರದಲ್ಲಿ ಬಿರುಗಾಳಿ: ಡಿವೋರ್ಸ್‌ಗೆ ಮುಂದಾದ ಸ್ಟಾರ್‌ ಜೋಡಿ

ಭಾರತೀಯ ಟೆನೋಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ನಿಸ್ಸಂದೇಹವಾಗಿ ಕ್ರೀಡೆಯಲ್ಲಿ ಅತ್ಯಂತ ಸುಂದರವಾದ ಜೋಡಿಗಳಲ್ಲಿ ಒಬ್ಬರು. ಆದರೆ ಸಾನಿಯಾ ಮಿರ್ಜಾ ಮತ್ತು ಶೋಯೆಬ್‌ ಮಲಿಕ್‌ ದಾಂಪತ್ಯ ಜೀವನದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತು ಕೇಳಿಬರುತ್ತಿದೆ.. ಈ ಜೋಡಿ ವಿಚ್ಛೇದನ ಪಡೆಯಲಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹಬ್ಬಿದೆ.

ಇಬ್ಬರ ನಡುವೆ ಕೆಲ ಸಮಯದಿಂದ ಎಲ್ಲವೂ ಸರಿಯಿಲ್ಲ. ಇಬ್ಬರೂ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದಾರೆ. ಮತ್ತು ಮಗ ಇಜಾನ್‌ನನ್ನು ಒಬ್ಬೊಬ್ಬರು ಒಂದಷ್ಟು ದಿನ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ. ಕೆಲವು ದಿನಗಳ ಹಿಂದೆ ಸಾನಿಯಾ ಮಿರ್ಜಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಡಿದ ಪೋಸ್ಟ್​ನಿಂದ ಈ ಎಲ್ಲಾ ವದಂತಿಗಳಿಗೆ ರೆಕ್ಕೆಪುಕ್ಕ ಸಿಕ್ಕಿದೆ.

ಕೆಲವು ದಿನಗಳ ಹಿಂದೆ ತಮ್ಮ ಇನ್​ಸ್ಟಾಗ್ರಾಂ ಪೋಸ್ಟ್​ನಲ್ಲಿ ಸ್ಟೋರಿಯೊಂದನ್ನು ಪೋಸ್ಟ್ ಮಾಡಿದ್ದ ಸಾನಿಯಾ ಅದರಲ್ಲಿ “ಒಡೆದ ಹೃದಯಗಳು ಎಲ್ಲಿಗೆ ಹೋಗುತ್ತವೆ. ಅಲ್ಲಾನನ್ನು ಹುಡುಕಲು” ಎಂದು ಬರೆದುಕೊಂಡಿದ್ದರು. ಅಲ್ಲಿಂದ ಈ ಕ್ರೀಡಾ ದಂಪತಿಗಳ ನಡುವೆ ಎಲ್ಲವೂ ಸರಿ ಇಲ್ಲ ಎಂಬ ಗುಮಾನಿ ಎಲ್ಲಾ ಕಡೆ ಹರಡಿದೆ.

ಸಾನಿಯಾ ಮಿರ್ಜಾ ಮತ್ತು ಶೋಯೆಬ್‌ ಮಲಿಕ್‌ 2010ರಲ್ಲಿ ಮದುವೆಯಾಗಿದ್ದರು. ಎರಡು ದೇಶಗಳ ನಡುವೆ ದ್ವೇಷಗಳಿದ್ದರೂ ದೇಶಗಳ ಹಂಗು ಮೀರಿ ಇಬ್ಬರೂ ಮದುವೆಯಾಗಿದ್ದರು. ಅಲ್ಲದೆ ಈ ದಂಪತಿಗಳಿಗೆ 2018 ರಲ್ಲಿ ಗಂಡು ಮಗು ಕೂಡ ಜನಿಸಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top