fbpx
ಸಮಾಚಾರ

ಮಹೇಶ್ ಬಾಬು ತಂದೆ ಟಾಲಿವುಡ್ ಸೂಪರ್ ಸ್ಟಾರ್ ‘ಕೃಷ್ಣ’ ನಿಧನ

ಟಾಲಿವುಡ್ ಸೂಪರ್ ಸ್ಟಾರ್ ‘ಕೃಷ್ಣ’ ಕೊನೆಯುಸಿರೆಳೆದಿದ್ದಾರೆ. ಸೋಮವಾರ ಹೃದಯಾಘಾತದಿಂದ ಹೈದರಾಬಾದ್‌ನ ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ವೈದ್ಯರು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಅವರು ವಿಧಿವಶರಾಗಿದ್ದಾರೆ.

ಸದ್ಯ ಕೃಷ್ಣ ಅವರ ಪಾರ್ಥಿವ ಶರೀರವನ್ನು ಇಂದು ಮದ್ಯಾಹ್ನ ಕೃಷ್ಣ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇರಿಸಲಿದ್ದು. ಇಂದು ಸಂಜೆ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಮಹೇಶ್ ಬಾಬು ಕುಟುಂಬ ಮೂಲಗಳು ತಿಳಿಸಿವೆ. ಕೃಷ್ಣ ಅವರಿಗೆ 79 ವರ್ಷ ವಯಸ್ಸಾಗಿತ್ತು.

1943ರಲ್ಲಿ ಗುಂಟೂರು ಜಿಲ್ಲೆಯ ಬುರ್ರೆಪಾಲೆಂನಲ್ಲಿ ಜನಿಸಿದ ಕೃಷ್ಣ ಅವರ ಪೂರ್ಣ ಹೆಸರು ಘಟ್ಟಮನೇನಿ ಶಿವ ರಾಮ ಕೃಷ್ಣ ಮೂರ್ತಿ. ಚಿತ್ರರಂಗದಲ್ಲಿ ಅವರು ಕೃಷ್ಣ ಎಂದೇ ಪ್ರಸಿದ್ಧಿ ಪಡೆದರು. 1965ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಕೃಷ್ಣ ಸುಮಾರು 55 ವರ್ಷಕ್ಕೂ ಅಧಿಕ ಸಮಯ ಸಿನಿಮಾರಂಗದಲ್ಲಿ ತೊಡಗಿಕೊಂಡಿದ್ದರು. ಕೃಷ್ಣ 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಮಗ ಮಹೇಶ್‌ ಬಾಬು ಕೂಡ ಟಾಲಿವುಡ್‌ನ ಸ್ಟಾರ್ ನಟ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top