fbpx
ಸಮಾಚಾರ

ಜಿಲ್ಲಾಧಿಕಾರಿ ಕಚೇರಿಯಲ್ಲಿ ನೇಮಕಾತಿ: 58 ಕ್ಲೀನರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಗದಗ ಜಿಲ್ಲೆ ವ್ಯಾಪ್ತಿಯಲ್ಲಿ ಕೆಲಸ ಹುಡುಕುವ ಉದ್ಯೋಗಾಕಾಂಕ್ಷಿಗಳಿಗೊಂದು ಸುವರ್ಣ ಅವಕಾಶ. ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 58 ಲೋಡರ್ ಮತ್ತು ಕ್ಲೀನರ್ ಕೆಲಸಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೂಡಲೇ ಅರ್ಜಿ ಹಾಕಬಹುದು. ನವೆಂಬರ್ 28, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ವಯೋಮಿತಿ:
ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ 55 ವರ್ಷ ಇರಬೇಕು.

ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 17,000 ರೂ.ನಿಂದ 28.950ರೂ.ವರಗೆ ವೇತನ ಇರಲಿದೆ.

ಅರ್ಜಿ ಸಲ್ಲಿಸಲು ಕೊನೆ ದಿನ:
28/11/2022

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನವೆಂಬರ್ 28, 2022ರೊಳಗೆ ಕಳುಹಿಸಬೇಕು.

ಅರ್ಜಿ ಎಲ್ಲಿ ಸಿಗುತ್ತವೆ?

ಅಭ್ಯರ್ಥಿಗಳು ಅರ್ಜಿಯನ್ನು ಕೊಠಡಿ ಸಂಖ್ಯೆ-123, ಮೊದಲನೇ ಮಹಡಿ, ಜಿಲ್ಲಾ ನಗರಾಭಿವೃದ್ಧಿ ಘಟಕ, ಜಿಲ್ಲಾಧಿಕಾರಿಗಳ ಕಚೇರಿ,ಗದಗ ಇಲ್ಲಿ ಅರ್ಜಿಗಳು ದೊರೆಯುತ್ತವೆ

ಕೊಠಡಿ ಸಂಖ್ಯೆ-123
ಮೊದಲನೇ ಮಹಡಿ
ಜಿಲ್ಲಾ ನಗರಾಭಿವೃದ್ಧಿ ಘಟಕ
ಜಿಲ್ಲಾಧಿಕಾರಿಗಳ ಕಚೇರಿ
ಗದಗ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top