fbpx
ಸಮಾಚಾರ

ಇನ್ನು ನೀವು ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮದಿಲ್ವೇ? ಹಾಗಿದ್ದರೆ ಈ ಕೂಡಲೇ ಮಾಡಿ ಇಲ್ಲವಾದರೆ ನಿಮ್ಮ ಪಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ

ನೀವು ಆಧಾರ್ ಕಾರ್ಡ್ ಜೊತೆ ಪಾನ್ ಕಾರ್ಡ್ ಇನ್ನು ಕೂಡ ಲಿಂಕ್ ಮಾಡಿಲ್ಲವೇ? ಒಂದು ವೇಳೆ ಲಿಂಕ್ ಮಾಡದಿದ್ದರೆ 2023 ಮಾರ್ಚ್ 31 ರ ಒಳಗೆ ಲಿಂಕ್ ಮಾಡಬೇಕು. ಒಂದು ವೇಳೆ ನೀವು ಮಾಡದಿದ್ದರೆ ಕೂಡಲೇ ನಿಮ್ಮ ಪಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ತಿಳಿಸಿದೆ.

ಈ ಹಿಂದೆ 2022 ಮಾರ್ಚ್ 31 ರ ಒಳಗೆ ಆಧಾರ್ ಕಾರ್ಡ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡದೇ ಇದ್ದವರಿಗೆ 1,000 ರೂ. ದಂಡ ವಿಧಿಸಲಾಗುತ್ತಿದೆ. ಇಷ್ಟಾದರೂ ಸಹ ಕೆಲವೊಬ್ಬರು ಇನ್ನು ಕೂಡ ತಮ್ಮ ಪಾನ್ ಕಾರ್ಡ್ ಅನ್ನು ಲಿಂಕ್ ಮಾಡಿಲ್ಲ. ಹೀಗಾಗಿ ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ಒಂದು ಹೆಜ್ಜೆ ಮುಂದೆ ಸಾಗಿ ಇದೀಗ ಮಹತ್ವದ ನಿರ್ಧಾರ ಕೈಗೊಂಡಿದೆ. ಅದೇನೆಂದರೆ 2023ರ ಮಾರ್ಚ್ 31ರ ಒಳಗೆ ನೀವು ನಿಮ್ಮ ಪಾನ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ದರೆ ನಿಮ್ಮ ಪಾನ್ ಕಾರ್ಡ್ ನಿಷ್ಕ್ರಿಯವಾಗುತ್ತದೆ. ಇದಲ್ಲದೆ ಮುಂದೆ ನೀವು ನಿಮ್ಮ ಆಧಾರ್ ಕಾರ್ಡ್ ಗೆ ಪಾನ್ ಕಾರ್ಡ್ ಅನ್ನು ಲಿಂಕ್ ಮಾಡಿಸುವ ಅವಕಾಶ ಕೂಡ ಸಿಗುವುದಿಲ್ಲ.

 

 

ಈ ಕುರಿತು ಟ್ವೀಟ್ ಮಾಡಿರುವ ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ” ಆದಾಯ ತೆರಿಗೆ ಕಾಯ್ದೆ, 1961 ರ ಪ್ರಕಾರ, ವಿನಾಯಿತಿ ಪಡೆದ ವರ್ಗದಲ್ಲಿ ಬರದ ಎಲ್ಲಾ ಪ್ಯಾನ್ ಹೊಂದಿರುವವರಿಗೆ ಆಧಾರ್‌ನೊಂದಿಗೆ ಅದನ್ನು ಲಿಂಕ್ ಮಾಡಲು ಕೊನೆಯ ದಿನಾಂಕ 2023ರ ಮಾರ್ಚ್ 31 ಕೊನೆಯ ದಿನವಾಗಿದೆ. ಅಷ್ಟರೊಳಗೆ ಲಿಂಕ್ ಮಾಡದಿದ್ದರೆ, ಪ್ಯಾನ್ ನಿಷ್ಕ್ರಿಯವಾಗಲಿದೆ. ತಡ ಮಾಡಬೇಡಿ, ಇಂದೇ ಲಿಂಕ್ ಮಾಡಿ ” ಎಂದು ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top