ಬೆಂಗಳೂರಿನ ಕೆಆರ್ ಮಾರ್ಕೆಟ್ನಲ್ಲಿ ಮಂಗಳವಾರ ವಿಚಿತ್ರ ಘಟನೆಯೊಂದು ನಡೆದಿದೆ. ಕೆಆರ್ ಮಾರ್ಕೆಟ್ ಫ್ಲೈಓವರ್ ಮೇಲಿಂದ ಯುವಕನೊಬ್ಬ ಹಣದ ನೋಟುಗಳನ್ನ ಎಸೆದಿರುವ ವಿಚಿತ್ರ ಘಟನೆ ನಡೆದಿದೆ. ಹಣ ಎಸೆದ ಯುವಕನನ್ನು ಅರುಣ್ ಎಂದು ಗುರುತಿಸಲಾಗಿದ್ದು, ವ್ಯಕ್ತಿ ಹಣ ಎಸೆದು ಅಲ್ಲಿಂದ ಪರಾರಿಯಾಗಿದ್ದಾನೆ. ಹಾಗೆಯೆ ಯಾವ ಕಾರಣಕ್ಕೆ ಹಣ ಎಸೆದಿದ್ದಾನೆ ಎಂಬುದು ತಿಳಿದುಬಂದಿಲ್ಲ.
#Bizarre in #Bengaluru#Traffic came to halt on #Sirsi Circle #flyover and the road below it (#KRMarket) after a well-dressed youth went about throwing currency notes. Who was he and why did he do it is not known. @NammaBengaluroo @WFRising @TOIBengaluru @peakbengaluru pic.twitter.com/zXB6mndKm6
— Rakesh Prakash (@rakeshprakash1) January 24, 2023
ಕೆ.ಆರ್ ಮಾರ್ಕೆಟ್ ಫ್ಲೈಓವರ್ ಮೇಲಿಂದ ದುಡ್ಡಿನ್ನು ಎಸೆಯುತ್ತಿದ್ದಂತೆ ಫ್ಲೈಓವರ್ನ ಅಕ್ಕಪಕ್ಕ ಇದ್ದವರೆಲ್ಲರೂ ಆ ದುಡ್ಡನ್ನು ಪಡೆದುಕೊಳ್ಳಲು ನಾ ಮುಂದು ತಾ ಮುಂದು ಎಂದು ಮುಗಿಬಿದ್ದರು. ಫ್ಲೈ ಓವರ್ನ ಎರಡು ಬದಿಯಲ್ಲಿ ನೋಟುಗಳು ಎಸೆಯುತ್ತಿದ್ದರೆ, ಕೆಲಸ ಕಾರ್ಯಗಳಲ್ಲಿ ತೊಡಗಿದ್ದವರು ಆ ದುಡ್ಡನ್ನು ಎತ್ತಿಕೊಳ್ಳಲು ಮುಗಿಬಿದ್ದಿದ್ದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಈತ ಬೆಂಗಳೂರಿನ K R ಮಾರ್ಕೆಟ್ ಫ್ಲೈ ಓವರ್ ಮೇಲಿಂದ ದುಡ್ಡು ಎಸೆದಿದ್ದಾನೆ
ಇವನ ಬಗ್ಗೆ ಮಾಹಿತಿ ದೊರೆತರೆ ತಕ್ಷಣ ನಮ್ಮ ಪಕ್ಷದ ಕಚೇರಿಗೆ ಮಾಹಿತಿ ನೀಡಿ 😅😂pic.twitter.com/gJ6W9AEY8B
— 🇮🇳 Madhukumar.V.P🇮🇳 (@MadhukumarVP1) January 24, 2023
ಈ ಕುರಿತಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್ ನಿಂಬರಗಿ, ಕೆಆರ್ ಮಾರ್ಕೆಟ್ ಫ್ಲೈ ಓವರ್ ಮೇಲೆ ನಿಂತು ಹಣ ಎಸೆದು ವ್ಯಕ್ತಿ ಹೋಗಿದ್ದಾನೆ. ಹತ್ತು ರೂಪಾಯಿ ನೋಟುಗಳನ್ನ ವ್ಯಕ್ತಿ ಎಸೆದು ಹೋಗಿದ್ದು, ಆದರೆ ಎಷ್ಟು ನೋಟು ಎಸೆದಿದ್ದಾರೆ ಅನ್ನೋ ಬಗ್ಗೆ ಮಾಹಿತಿ ಇಲ್ಲ. ಸ್ಥಳಕ್ಕೆ ಸಿಟಿ ಮಾರ್ಕೆಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಣ ಎಸೆದು ಹೋದ ವ್ಯಕ್ತಿ ಪತ್ತೆ ಮಾಡಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
