ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಗುರುಪೀಠದ ವಾಕ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಅವರು ಹೋಗಿರಲಿಲ್ಲ. ಇದರಿಂದ ಕಿಚ್ಚನ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಅಲ್ಲಿರುವ ಕುರ್ಚಿಗಳನ್ನು ಒಡೆದು ಹಾಕಿದ್ದರು. ಸುದೀಪ್ ಕಾರ್ಯಕ್ರಮಕ್ಕೆ ಹಾಜರಿ ಹಾಕದೆ ಇರುವುದು ಏಕೆ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಇದಕ್ಕೆ ಈಗ ಕಿಚ್ಚ ಸುದೀಪ್ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ನೆನ್ನೆಯ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸುದೀಪ್ ಅಭಿಮಾನಿಗಳು ಸೇರಿದಂತೆ ಜನರು ಸೇರಿದ್ದರು. ಅಲ್ಲದೆ, ಸುದೀಪ್ ಬರುವಿಕೆಗಾಗಿ ಕಾಯುತ್ತ ಕುಳಿತಿದ್ದರು. ಆದರೆ, ಸಂಜೆ ವೇಳೆ ಸುದೀಪ್ ಬರುವುದಿಲ್ಲ ಎಂಬ ವಿಷಯ ಗೊತ್ತಾಗುತ್ತಿದ್ದಂತೆ ಆಕ್ರೋಶಗೊಂಡ ಅಭಿಮಾನಿಗಳು ಸ್ಥಳದಲ್ಲಿಯೇ ಇದ್ದ ಕುರ್ಚಿಗಳನ್ನು ತೂರಲು ಪ್ರಾರಂಭಿಸಿದರು.
ಕಾರ್ಯಕ್ರಮಕ್ಕೆ ಗೈರಾದ ಬಗ್ಗೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ‘ಸ್ನೇಹಿತರಿಗೆ ನಮಸ್ಕಾರ. ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು. ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ. ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ. ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ. ಆದರೂ, ಇಂದು ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ. ನಿಮ್ಮ ಜೊತೆ ಬೆರೆಯಲು ನನಗೂ ಅತೀವ ಆಸೆ . ಮುಂದೆ ಖಂಡಿತ ಬರುವೆ. ಪ್ರೀತಿ ಇರಲಿ. ಶಾಂತರೀತಿಯಿಂದ ವರ್ತಿಸಿ. ಪ್ರೀತಿಯೊಂದಿಗೆ ನಿಮ್ಮ ಕಿಚ್ಚ’ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
