fbpx
ಸಮಾಚಾರ

ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತ್ಯುತ್ತಮ ನಟ ಮತ್ತು ನಟಿ ಪ್ರಶಸ್ತಿಗೆ ಭಾಜನರಾದ ರಿಷಬ್ ಶೆಟ್ಟಿ ಮತ್ತು ಶರ್ಮಿಳಾ- ಇಲ್ಲಿದೆ ಪ್ರಶಸ್ತಿಯ ಸಂಪೂರ್ಣ ಮಾಹಿತಿ

ಇತ್ತೀಚಿಗೆ ಸಿನಿಮಾಗಳಿಗೆ ಸಂಬಂಧಿಸಿದಂತೆ ಹಲವಾರು ಪ್ರಶಸ್ತಿ ಪ್ರಧಾನ ಕಾರ್ಯಕ್ರಮಗಳು ನಡೆಯುತ್ತಿದೆ. ಇದೀಗ 4 ನೇ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆದಿದ್ದು, ಇದರಲ್ಲಿ 2022 ರಲ್ಲಿ ಬಿಡುಗಡೆಯಾಗಿ ಇತಿಹಾಸ ಸೃಷ್ಟಿಸಿದ ಕನ್ನಡ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿತ್ತು.

ಸಮಾರಂಭದಲ್ಲಿ ಹೆಚ್ಚಿನ ಪ್ರಶಸ್ತಿಯನ್ನು ಪ್ರಪಂಚದಲ್ಲಿ ಸಂಚಲನ ಸೃಷ್ಟಿಸಿದ ಕೆಲವು ಕನ್ನಡ ಸಿನಿಮಾಗಳಾದ ಕಾಂತಾರ ಮತ್ತು ಕೆಜಿಎಫ್ ಸಿನಿಮಾಗಳು ಬಾಚಿಕೊಂಡವು. ಅತ್ಯುತ್ತಮ ಪ್ರಶಸ್ತಿಯನ್ನು ಕಾಂತಾರ ಸಿನಿಮಾದ ನಟ ರಿಷಬ್ ಶೆಟ್ಟಿ ಅವರ ಕೈ ಸೇರಿತು, ಇನ್ನು ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗಾಳಿಪಟ 2 ಚಿತ್ರಕ್ಕಾಗಿ ಶರ್ಮಿಳಾ ಮಾಂಡ್ರೆ ಅವರಿಗೆ ಸೇರಿದೆ.

ಅತ್ಯುತ್ತಮ ಚಿತ್ರ ಪ್ರಶಸ್ತಿ ‘ಕಾಂತರ’ ಕೈ ಸೇರಿದೆ. ಅತ್ಯುತ್ತಮ ಸಂಗೀತ ಪ್ರಶಸ್ತಿ ಕಾಂತಾರ ಚಿತ್ರಕ್ಕಾಗಿ ಅಜನೀಶ್ ಲೋಕನಾಥ್ ಪಡೆದುಕೊಂಡರೆ, ಅತ್ಯುತ್ತಮ ಸ್ಟಂಟ್ ಪ್ರಶಸ್ತಿಯು ಕಾಂತಾರ ಸಿನಿಮಾದ ವಿಕ್ರಮ್ ಮೋರ್ ಪಡೆದಿದ್ದಾರೆ. ಇದು ಕಾಂತಾರ ಸಿನಿಮಾಕ್ಕೆ ಸಿಕ್ಕ ಪ್ರಶಸ್ತಿಗಳು.

ಇನ್ನು ರಾಕಿ ಭೈ ಯಶ್ ಅಭಿಯಾಯದ ಕಿಜಿಎಫ್ ಸಿನಿಮಾಕ್ಕೆ ಸಂಬಂಧಿಸಿದಂತೆ ಅತ್ಯುತ್ತಮ ಸಿನಿಮಾಟೋಗ್ರಫಿ ಭುವನ್ ಗೌಡ ಕೈ ಸೇರಿದೆ, ಅತ್ಯುತ್ತಮ ಸಂಕಲನಕ್ಕಾಗಿ ಪ್ರಜ್ವಲ್ ಕುಲಕರ್ಣಿ ಹಾಗೂ ಅತ್ಯುತ್ತಮ ವಿಎಫ್ ಎಕ್ಸ್ ಹಾಗಿ ಉದಯ ರವಿ ಹೆಗಡೆ ಪ್ರಶಸ್ತಿ ಸ್ವೀಕರಿಸಿದರು. ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು 777 ಚಾರ್ಲಿ (777 Charlie) ಚಿತ್ರಕ್ಕಾಗಿ ಕಿರಣ್ ರಾಜ್ ಕೆ ಪಡೆದುಕೊಂಡರು.

ಇಲ್ಲಿದೆ ಪ್ರಷ್ಟಿಯ ಸಂಪೂರ್ಣ ವಿವರ:

ಅತ್ಯುತ್ತಮ ಚಿತ್ರ
ಕಾಂತಾರ

ಅತ್ಯುತ್ತಮ ನಾಯಕ
ರಿಷಬ್ ಶೆಟ್ಟಿ (ಕಾಂತಾರ)

ಅತ್ಯುತ್ತಮ ನಿರ್ದೇಶಕ
ಕಿರಣ್ ರಾಜ್ (ಚಾರ್ಲಿ)

ಅತ್ಯುತ್ತಮ ಸಂಭಾಷಣೆ
ಮಾಸ್ತಿ (ಗುರು ಶಿಷ್ಯರು)
ಅತ್ಯುತ್ತಮ ಪೋಷಕ ನಟ
ಸುಚೇಂದ್ರ ಪ್ರಸಾದ್ (ವ್ಹೀಲ್ ಚೇರ್ ರೋಮಿಯೋ)

ಅತ್ಯುತ್ತಮ ನಾಯಕಿ
ಶರ್ಮಿಳಾ ಮಾಂಡ್ರೆ (ಗಾಳಿಪಟ 2)

ಅತ್ಯುತ್ತಮ ಪೋಷಕ ನಟಿ
ಸುಧಾರಾಣಿ (ತುರ್ತು ನಿರ್ಗಮನ)

ಅತ್ಯುತ್ತಮ ಚಿತ್ರಕಥೆ
ಡಾರ್ಲಿಂಗ್ ಕೃಷ್ಣ (ಲವ್ ಮಾಕ್ಟೆಲ್ 2)

ಅತ್ಯುತ್ತಮ ಬಾಲನಟ/ನಟಿ
ಶಾರ್ವರಿ (ಚಾರ್ಲಿ)

ಅತ್ಯುತ್ತಮ ಸಂಗೀತ
ಕಾಂತಾರ (ಅಜನೀಶ್)

ಅತ್ಯುತ್ತಮ ಹಿನ್ನೆಲೆ ಸಂಗೀತ
ಅನೂಪ ಸೀಳೀನ್ (ಮಾನ್ಸೂನ್ ರಾಗ)

ಅತ್ಯುತ್ತಮ ಗಾಯಕ
ಮೋಹನ್ (ಜುಂಜಪ್ಪ, ವೇದ)

ಅತ್ಯುತ್ತಮ ಚಿತ್ರ ಸಾಹಿತ್ಯ
ಶಶಾಂಕ (ಲವ್ 350)

ಅತ್ಯುತ್ತಮ ಗಾಯಕಿ
ಐಶ್ವರ್ಯ ರಂಗರಾಜ್ (ಏಕ್ ಲವ್ ಯಾ)

ಅತ್ಯುತ್ತಮ ಛಾಯಾಗ್ರಹಣ
ಭುವನ್ ಗೌಡ (ಕೆಜಿಎಫ್ 2)

ಅತ್ಯುತ್ತಮ ಸಂಕಲನ
ಉಜ್ವಲ್ ಕುಲಕರ್ಣಿ (ಕೆಜಿಎಫ್2)

ಅತ್ಯುತ್ತಮ ಕಲಾ ನಿರ್ದೇಶನ
ಶಿವಕುಮಾರ (ವಿಕ್ರಾಂತ ರೋಣ)

ಅತ್ಯುತ್ತಮ ನೃತ್ಯ ನಿರ್ದೇಶನ
ಮೋಹನ್ (ಏಕ್ ಲವ್ ಯಾ, ಮೀಟ್ ಮಾಡೋಣ)

ಅತ್ಯುತ್ತಮ ಸಾಹಸ
ವಿಕ್ರಮ್ ಮೋರ್ (ಕಾಂತಾರ)

ಅತ್ಯುತ್ತಮ ವಿಎಫ್ ಎಕ್ಸ್
ಉದಯ ರವಿ ಹೆಗಡೆ ಯೂನಿಫೈ ಮೀಡಿಯಾ (ಕೆಜಿಎಫ್2)

ಅತ್ಯುತ್ತಮ ನಟ (ಡೆಬ್ಯು)
ಪೃಥ್ವಿ ಶ್ಯಾಮನೂರು (ಪದವಿ ಪೂರ್ವ)

ಅತ್ಯುತ್ತಮ ನಟಿ (ಡೆಬ್ಯು)
ಯಶಾ ಶಿವಕುಮಾರ್ (ಮಾನ್ಸನ್ ರಾಗ)

ಅತ್ಯುತ್ತಮ ನಿರ್ದೇಶಕ (ಡೆಬ್ಯು)
ಶ್ರೀಧರ್ ಶಿಕಾರಿಪುರ (ಧರಣಿ ಮಂಡಲ ಮಧ್ಯದೊಳಗೆ)

ಅತ್ಯುತ್ತಮ ನಿರ್ಮಾಪಕ (ಡೆಬ್ಯು)
ಪವನ್ ಒಡೆಯರ್ (ಡೊಳ್ಳು)

ಅತ್ಯುತ್ತಮ ಬರಹಗಾರ (ಡೆಬ್ಯು)
ಶ್ರೀಧರ್ ಶಿಕಾರಿಪುರ (ಧರಣಿ ಮಂಡಲ ಮಧ್ಯದೊಳಗೆ)

ಅತ್ಯುತ್ತಮ ಯುಟ್ಯೂಬರ್
ಕಲಾ ಮಾಧ್ಯಮ (ಪರಮೇಶ್ವರ ಕೆ.ಎಸ್)

ಅತ್ಯುತ್ತಮ ಮನರಂಜನಾ ಸಾಮಾಜಿಕ ಜಾಲತಾಣ
ವಿಕ್ಕಿ ಪೀಡಿಯಾ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top