ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಇಂದು ಅಪ್ಪು ಹೆಸರಿನಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಾ ಬಂದಿದೆ. ಅಪ್ಪು ನೆನೆದು ಅಪ್ಪು ಸಮಾದಿಯತ್ತ ಅಭಿಮಾನಿಗಳು ಬರುತ್ತಿದ್ದಾರೆ. ಇವೆಲ್ಲದರ ನಡುವೆ ಅಪ್ಪು ಕುರಿತು ಶಿವಣ್ಣ ಮಾಡಿರುವ ಭಾವನಾತ್ಮಕ ಪೋಸ್ಟ್ ಒಂದು ಸಕತ್ ವೈರಲ್ ಆಗುತ್ತಿದೆ.
ಅಪ್ಪು ಹುಟ್ಟುಹಬ್ಬಕ್ಕೆ ಶಿವಣ್ಣ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದಾರೆ. ” ನಿನ್ನ ನೆನಪುಗಳು ಎಂದಿಗೂ ಅಮರ. ಹುಟ್ಟುಹಬ್ಬದ ಶುಭಾಶಯಗಳು” ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಇದರ ಜೊತೆ ಒಂದು ಭಾವನಾತ್ಮಕ ಪೋಸ್ಟ್ ಕೂಡ ಹಂಚಿಕೊಂಡಿದ್ದಾರೆ.
” ನೀನು ಹುಟ್ಟಿದಾಗ ನಮ್ಮ ಮನೆಯಲ್ಲಿ ಉಲ್ಲಾಸ ಉಕ್ಕಿ ಹರಿಯುತ್ತಿತ್ತು. ನಿನ್ನ ಕಣ್ಣಲ್ಲಿದ್ದ ಹೊಳಪು ನೀವು ಆವಾಗಲೇ ಪವರ್ ಸ್ಟಾರ್ ಆಗೋದನ್ನು ಹೇಳುತ್ತಿತ್ತು. ನೀನು ನಕ್ಕರೆ ಎಲ್ಲರು ನಗ್ತಾ ಇದ್ರೂ. ನೀನು ಕುಣಿದರೆ ಎಲ್ಲರು ರೋಮಾಂಚನದಿಂದ ನೋಡ್ತಾಯಿದ್ರು. ಮನೆಗೆ ಬಂದ ನೆಂಟರು ಮತ್ತು ಅತಿಥಿಗಳಿಗೆ ನೀನೆ ಬೇಕು. ಅಂತಹ ಪುಟ್ಟ ಅಪ್ಪು ಮಿಂಚಿನಂತೆ ತೆರೆಯಮೇಲೆ ಬಂದು ಹೆಮ್ಮರವಾಗಿ ಕೋಟ್ಯಾಂತರ ಜನರಿಗೆ ನೆರಳಾಗಿದ್ದನ್ನು ಹತ್ತಿರದಿಂದ ನೋಡಿದ ನಾನೇ ಪುನೀತ”
” ನಿನ್ನನ್ನು ಎತ್ತಿ ಆಡಿಸಿದ ಅಣ್ಣನಾಗಿ, ನಿನ್ನ ಜೊತೆ ಕೂಡಿ ಆಡಿದ ಸ್ನೇಹಿತನಾಗಿ, ನಿನ್ನ ಕೆಲಸಗಳನ್ನು ಮೆಚ್ಚಿ ಅಪ್ಪಿಕೊಂಡ ಕನ್ನಡಿಗನಾಗಿ, ಹಬ್ಬ ಯಾವದೇ ಆಗಿದ್ರು ನಿನ್ನ ಹೆಸರಲ್ಲಿ ಪಟಾಕಿ ಅಚೊ ಅಭಿಮಾನಿಗಳಲ್ಲಿ ಒಬ್ಬನಾಗಿ ಹೇಳ್ತಾಯಿದೀನಿ ನೀನು ಹುಟ್ಟಿದ್ದೇ ಒಂದು ಉತ್ಸವ, ನೀನು ಬೆಳೆದಿದ್ದು ಇತಿಹಾಸ, ನೀನು ಜೀವನದ ಒಂದು ದಂತಕಥೆ, ನಿನ್ನ ನೆನಪುಗಳು ಎಂದಿಗೂ ಅಮರ! ಹುಟ್ಟು ಹಬ್ಬದ ಶುಭಾಶಯಗಳು ಅಪ್ಪು! ಎಂದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
