ಕಳೆದ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಹೊಸ ಕಾಂಗ್ರೆಸ್ ಸರ್ಕಾರ ತಾನು ಚುನಾವಣೆಗೂ ಮುನ್ನ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಕಾರ್ಯದಲ್ಲಿ ನಿರತವಾಗಿದೆ. ಈ ಮಧ್ಯೆ ತನ್ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರವು ನಾನಾ ಪದಾರ್ಥಗಳ ಮೇಲೆ ಬೆಲೆ ಏರಿಕೆ ಮಾಡಿದ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗುತ್ತಿದೆ. ಅದರಲ್ಲೂ ಮಧ್ಯದ ದರವನ್ನು ಸರ್ಕಾರ ಏರಿಸಲಾಗಿದ್ದು ಮಧ್ಯಪ್ರಿಯರ ಜೇಬಿಗೆ ಕತ್ತರಿ ಬೀಳುತ್ತಿದೆ ಎಂಬ ಸುದ್ದಿಯು ಕೂಡ ಹರಿದಾಡುತ್ತಿದೆ. ಈ ಎಲ್ಲಾ ಸುದ್ದಿಗಳಿಗೆ ಸ್ವತಹ ಅಬಕಾರಿ ಸಚಿವರು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯ ಸರ್ಕಾರವು ಯಾವುದೇ ರೀತಿಯಲ್ಲೂ ಮದ್ಯದ ಮೇಲಿನ ಅಬಕಾರಿ ತೆರಿಗೆ ಹೆಚ್ಚಳ ಮಾಡಿಲ್ಲ. ಹೀಗಾಗಿ ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ ಹೆಚ್ಚಳವಾಗಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟಪಡಿಸಿದ್ದಾರೆ. ಸರ್ಕಾರವು ಮದ್ಯದ ಮೇಲಿನ ಅಬಕಾರಿ ತೆರಿಗೆ ಹಚ್ಚಳ ಮಾಡದಿದ್ದರೂ ಕೆಲವು ಬಾರ್‌ಗಳಲ್ಲಿ ಮದ್ಯ ಮಾರಾಟ ಬೆಲೆಯನ್ನು ಸರ್ಕಾರ ಹೆಚ್ಚು ಮಾಡಿದೆ ಎಂದು ಹೇಳಿಕೊಂಡು ಹೆಚ್ಚಿನ ಬೆಲೆಗೆ ಮಧ್ಯ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಬಾರ್‌ಗಳು ಅಕ್ರಮವಾಗಿ ಹೆಚ್ಚುವರಿ ದರಕ್ಕೆ ಮಾರಾಟ ಮಾಡುತ್ತಿದ್ದರೆ ರಿಯಾಲಿಟಿ ಚೆಕ್ ಮಾಡಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಮದ್ಯದ ದರ ಹೆಚ್ಚಳ ಮಾಡಿಲ್ಲ. ಈ ಬಗ್ಗೆ ಯಾವುದೇ ಅಧಿಕೃತ ಆದೇಶವೂ ಆಗಿಲ್ಲ. ಮದ್ಯದ ದರ ಹೆಚ್ಚಳ ಮಾಡುವ ವಿಚಾರವಾಗಿ ಯಾವುದೇ ಪ್ರಸ್ತಾವನೆ ಕೂಡ ನಮ್ಮ ಮುಂದೆ ಇಲ್ಲ. ಹಾಗೇನಾದರೂ ಹೆಚ್ಚಳ ಮಾಡಿದ್ದರೆ ನಾವೇ ಮಾಹಿತಿ ಕೊಡುತ್ತಿದ್ದೆವು ಎಂದು ಹೇಳಿದರು. ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
