fbpx
ಸಮಾಚಾರ

ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯಲ್ಲಿ ಅಚ್ಚರಿಯ ಹೆಸರು! ಇಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರಧಾನ

ಕರ್ನಾಟಕ ಸರ್ಕಾರ ಪ್ರತಿವರ್ಷ ಕೆಂಪೇಗೌಡ ಪ್ರಶಸ್ತಿಯನ್ನು ನೀಡುತ್ತದೆ. ಈ ಬಾರಿಯ ಕೆಂಪೇಗೌಡ ಪ್ರಶಸ್ತಿಯನ್ನು ಸರ್ಕಾರ ಮೂವರಿಗೆ ನೀಡಲಿದ್ದು, ಇದರಲ್ಲಿ ಈ ಬಾರಿ ಒಂದು ಅಚ್ಚರಿಯ ಸಂಸ್ಥೆಯ ಹೆಸರು ಸೇರಿದ್ದು, ಇದನ್ನು ಡಿಸಿಎಂ ಡಿಕೆ ಶಿವಕುಮಾರ್ ಎಲ್ಲರ ಸಮ್ಮುಖದಲ್ಲಿ ಬಹಿರಂಗಪಡಿಸಿದ್ದಾರೆ.

ಪ್ರತಿವರ್ಷ ಕೆಂಪೇಗೌಡ ಜಯಂತಿಯ ಪ್ರಯುಕ್ತ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಮೂವರು ಸಾಧಕರಿಗೆ ನೀಡಲಾಗುತ್ತದೆ. ಈ ಬಾರಿಯೂ ಸಹ ಒಂದು ಸಂಸ್ಥೆ ಹಾಗೂ ಮತ್ತಿಬ್ಬರು ಸಾಧಕರಿಗೆ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿರುವುದಾಗಿ ಡಿಕೆಶಿ ತಿಳಿಸಿದ್ದಾರೆ. ಸಾಧಕರನ್ನು ಆಯ್ಕೆ ಮಾಡುವ ಸಲುವಾಗಿ ಬಿ.ಎಲ್ ಶಂಕರ್ ಸಮಿತಿಯನ್ನು ರಚಿಸಲಾಗಿದ್ದು, ಬೆಂಗಳೂರಿನ ಜಯದೇವ ವಿಜ್ಞಾನ ಸಂಸ್ಥೆ ಸಾಧಕರ ಪಟ್ಟಿಯನ್ನು ಸೇರಿದೆ. ಈ ಆಸ್ಪತ್ರೆ 1600 ಬೆಡ್‌ಗಳನ್ನು ಹೊಂದಿದ್ದು, ಸಮಾಜದ ಎಲ್ಲಾ ವರ್ಗದವರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಹೃದ್ರೋಗ ಚಿಕಿತ್ಸೆಯನ್ನು ಒದಗಿಸುತ್ತಿದೆ. ಅಲ್ಲದೇ ತೀರಾ ಬಡವರಿಗೆ ಉಚಿತ ಚಿಕಿತ್ಸೆಯನ್ನು ಸಹ ಈ ಸಂಸ್ಥೆ ನೀಡುತ್ತಿದೆ. ಹೀಗಾಗಿ ಈ ಸಂಸ್ಥೆಯ ಹೆಸರನ್ನು ಸರ್ಕಾರ ಘೋಷಿಸಿದೆ.

ಅತ್ಯಂತ ಕಿರಿಯ ವಯಸ್ಸಿನಲ್ಲಿ ಉದ್ಯಮ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿರುವ ಯುವಉದ್ಯಮಿಯಾಗಿರುವ ಝಿರೋದಾ ಕಂಪನಿ ಸಂಸ್ಥಾಪಕ ನಿತಿನ್ ಕಾಮತ್ ಅವರು ಸಹಾ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರು ತಮ್ಮ ಉದ್ಯಮದಲ್ಲಿ ಬರುವ 25% ಹಣವನ್ನು ಸಮಾಜಸೇವೆಗೆ ಮೀಸಲಿಟ್ಟಿದ್ದಾರೆ.

ಬೆಂಗಳೂರಿನ (Bengaluru) ಯುವ ಗಾಲ್ಫ್ ಆಟಗಾರ್ತಿಯಾಗಿರುವ ಅದಿತಿ ಅಶೋಕ್ (Aditi Ashok) ಎಂಬವರು ಕೂಡಾ ಈ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. ಈಕೆ ವಿಶ್ವ ಗಾಲ್ಫ್ (Golf) ಆಟದಲ್ಲಿ ಮಹತ್ತರ ಸಾಧನೆ ಮಾಡಿದ್ದು, ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನಾಲ್ಕನೇ ಸ್ಥಾನ ಪಡೆದು ದೇಶದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅವರು ಇವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top