fbpx
ಸಮಾಚಾರ

ಚೈತ್ರಾ ವಾಸುದೇವನ್ ಸಂಸಾರದಲ್ಲಿ ಬಿರುಕು: ಡೈವೋರ್ಸ್ ಪಡೆದುಕೊಂಡ ಸ್ಟಾರ್ ನಿರೂಪಕಿ

‘ಬಿಗ್ ಬಾಸ್ ಕನ್ನಡ ಸೀಸನ್ 7’ರಲ್ಲಿ ಭಾಗವಹಿಸುವ ಮೂಲಕ ಚಾಲ್ತಿಗೆ ಬಂದಿದ್ದ ನಟಿ, ನಿರೂಪಕಿ ಚೈತ್ರಾ ವಾಸುದೇವನ್‌ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತಿ ಸತ್ಯ ನಾಯ್ಡು ಜತೆ ಚೈತ್ರಾ ಅವರು ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ಚೈತ್ರಾ ಅವರೇ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮೂಲಕ ಖಚಿತಪಡಿಸಿದ್ದಾರೆ.

 

 

ಚೈತ್ರ ವಾಸುದೇವನ್ ಅವರ ಬರಹ ಈ ರೀತಿ ಇದೆ:
“ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟ ಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನುಮುಂದೆಯೂ ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ಅಂದಹಾಗೆ ಮೂಲತಃ ಕುಂದಾಪುರ ಮೂಲದವರಾದ ಚೈತ್ರಾ ಅವರು ಕುಟುಂಬದವರ ಆಪೇಕ್ಷೆ ಮೇರೆಗೆ 2017ರಲ್ಲಿ ಸತ್ಯ ನಾಯ್ಡು ಜೊತೆ ವಿವಾಹವಾಗಿದ್ದರು. ಆದರೆ ಈಗ ವಿಚ್ಛೇದನದ ಮೂಲಕ ಸತ್ಯ ಮತ್ತು ಚೈತ್ರಾ ಸಾಂಸಾರಿಕ ಜೀವನವನ್ನು ಅಂತ್ಯಗೊಳಿಸಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top