ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ಮುಂಚೂಣಿ ಮಠಾಧೀಶ, ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲ ಮಂಟಪ ಮಠದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅಪರಿಚಿತರಿಂದ ಜೀವ ಬೆದರಿಕೆ ಬಂದಿದೆ. ಆಗಸ್ಟ್ 8ರಂದೇ ಈ ಪತ್ರ ಬಂದಿದ್ದು ವಿಷಯ ತಡವಾಗಿ ಬಹಿರಂಗವಾಗಿದೆ. ಶ್ರೀಗಳು ಭಕ್ತರ ಮುಂದೆ ವಿಷಯ ತಿಳಿಸಿದ್ದಾರೆ.
ಪತ್ರದಲ್ಲೇನಿದೆ?
‘ನಿಜಗುಣಾನಂದ ನಿನ್ನ ಸಾವು 2020ರಲ್ಲಿ ತಪ್ಪಿರಬಹುದು. 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಮಾತಿನ ಕೊಡ ತುಂಬಿದೆ. ಆದಷ್ಟು ಬೇಗ ನಿನ್ನ ಭಕ್ತಾದಿಗಳಿಗ ನಿನ್ನ ತಿಥಿ ಬಗ್ಗೆ ಹೇಳು. ನಮ್ಮ ಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆಯೇ ಬರುತ್ತದೆ. ನಿನ್ನ ಅಂತಿಮ ದಿನಗಳು ಪ್ರಾರಂಭವಾಗಿವೆ. ದಿನಗಳನ್ನು ಎಣಿಸು. ಓಂ ಶ್ರೀ ಕಾಳಿಕಾದೇವಿ ನಮಃ, ಓಂ ಶ್ರೀ ಕಾಳಿಕಾದೇವಿ ನಮಃ’ ಎಂದು ಬಿಳಿ ಹಾಳಿಯಲ್ಲಿ ಬರೆದು, ಅದನ್ನು ಪ್ಯಾಕೇಟ್‌ನಲ್ಲಿ ಇಟ್ಟು ಕಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ಮಾತ್ರವಲ್ಲದೆ, ಮೂಢನಂಬಿಕೆ ವಿರೋಧಿ ಹೋರಾಟದಲ್ಲೂ ನಿಜಗುಣಾನಂದ ಶ್ರೀಗಳು ಮುಂಚೂಣಿಯಲ್ಲಿದ್ದವರು. ಪ್ರಖರ ವಾಗ್ಮಿಯಾಗಿರುವ ಶ್ರೀಗಳ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ಕ್ರಾಂತಿಯಕಿಡಿಯನ್ನು ಹೊತ್ತಿಸಿವೆ. ಈ ಹಿಂದೆ ೨೦೨೦ರಲ್ಲಿ ಕೂಡ ಶ್ರೀಗಳಿಗೆ ಜೀವ ಬೆದರಿಕೆ ಕರೆ ಬಂದಿತ್ತು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
