fbpx
ಸಮಾಚಾರ

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಉಚ್ಚಾಟನೆ: ʼʼಅಡಹಾಕ್‌ʼʼ ಅಧ್ಯಕ್ಷರನ್ನಾಗಿ ಕುಮಾರಸ್ವಾಮಿ ನೇಮಕ

ಜನತಾದಳ-ಜಾತ್ಯತೀತ (ಜೆಡಿಎಸ್) ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗುರುವಾರ ಕರ್ನಾಟಕ ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಗೌಡರು ರಾಜ್ಯ ಕಾರ್ಯಕಾರಿ ಸಮಿತಿಯನ್ನೂ ವಿಸರ್ಜಿಸಿದರು. ಕಳೆದೆರಡು ದಿನಗಳಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸೇರುವ ಪಕ್ಷದ ನಿರ್ಧಾರದ ವಿರುದ್ಧ ಇಬ್ರಾಹಿಂ ದನಿ ಎತ್ತಿದ್ದರು. ಬಿಜೆಪಿ ಜತೆ ಕೈಜೋಡಿಸಿರುವ ಪಕ್ಷದ ನಾಯಕತ್ವದ ವಿರುದ್ಧ ಅವರ ಬಂಡಾಯ ಧೋರಣೆಯಿಂದ ಪಕ್ಷದ ಹೈಕಮಾಂಡ್ ಅಸಮಾಧಾನಗೊಂಡಿತ್ತು.

 

 

ಮಾಜಿ ಪ್ರಧಾನಿ ತಮ್ಮ ಪುತ್ರ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ಪಕ್ಷದ ಹೊಸ ತಾತ್ಕಾಲಿಕ ಅಧ್ಯಕ್ಷರನ್ನಾಗಿ ನೇಮಿಸಿದರು.

ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈ ಕೂಡಲೇ ಜಾರಿಗೆ ಬರುವಂತೆ ವಿಸರ್ಜನೆ ಮಾಡಿ, ಪಕ್ಷದ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ʼʼಅಡಹಾಕ್‌ʼʼ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಪ್ರಕಟನೆ ತಿಳಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top