fbpx
ಸಮಾಚಾರ

ದೀಪಾವಳಿ: ಹಸಿರು ಪಟಾಕಿ ಹೊರತುಪಡಿಸಿ ಇತರೆ ಪಟಾಕಿಗಳ ನಿಷೇಧ

ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶಬ್ದ ಮತ್ತು ವಾಯು ಮಾಲಿನ್ಯ ನಿಯಂತ್ರಣಕ್ಕೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಿದೆ. 11 ರಿಂದ 15 ರವರೆಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾಸ್ಥಿತಿಯಲ್ಲಿ ಜಾರಿಗೊಳಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿದೆ.

ರಾತ್ರಿ 8 ರಿಂದ 10 ರವರೆಗೆ ಮಾತ್ರ ಪಟಾಕಿ ಹಚ್ಚಲು ಅನುಮತಿಸಲಾಗಿದೆ. ಹಸಿರು ಪಟಾಕಿ ಮಾತ್ರ ಸುಡಬೇಕು. ಪಟಾಕಿ ಅಂಗಡಿಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿ, ಹಸಿರು ಪಟಾಕಿ ಹೊರತುಪಡಿಸಿ ಇತರೆ ಪಟಾಕಿಗಳನ್ನು ಮಾರಾಟ ಮಾಡಿದರೆ ಅವುಗಳನ್ನು ಜಪ್ತಿ ಮಾಡಿ ನಿರ್ವಾಹಕರ ವಿರುದ್ಧ ಪ್ರಕರಣ ದಾಖಲಿಸಬೇಕು.

ಹಸಿರು ಪಟಾಕಿ ಗಳು ಕ್ಯೂಆರ್ ಕೋಡ್ ಚಿಹ್ನೆಯನ್ನು ಹೊಂದಿರಬೇಕು. ಇಲ್ಲದ ಪಟಾಕಿ ನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಪಟಾಕಿ ಸುಡುವಾಗ ಪ್ರಾಣಿಗಳು, ಮಕ್ಕಳು ಮತ್ತು ವೃದ್ಧರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಇದೇ ತಿಂಗಳ 5ರಿಂದ 20ರವರೆಗೆ ನಿರಂತರ ವಾಯು ಮಾಲಿನ್ಯ ಪರೀಕ್ಷೆ ನಡೆಸಬೇಕು. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಾಲಿನ್ಯ ಮಾಪನ ಪರೀಕ್ಷೆ ಮಾಡಬೇಕು. ಹೊರ ದೇಶಗಳ ಅನಧಿಕೃತ ತಪಸ್ಸನ್ನು ನಿಷೇಧಿಸಬೇಕು. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿಯಮಾವಳಿಗಳ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬೇಕು. ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪಟಾಕಿ ಗಳನ್ನು ಸುಡಬಾರದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top