fbpx

ಬಿಬಿಎಂಪಿಯಲ್ಲಿ ಉದ್ಯೋಗಾವಕಾಶ: 4000 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಿಬಿಎಂಪಿಯು 4 ಸಾವಿರ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಘನತಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಘನತಾಜ್ಯ ನಿರ್ವಹಣೆ ವಿಭಾಗದಲ್ಲಿ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ (www.bbmp.gov.in) ಅರ್ಜಿ ಸಲ್ಲಿಸಬಹುದು.

ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಗ್ರೂಪ್ “ಡಿ” ವೃಂದದ 4000 ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಸೆಪ್ಟೆಂಬರ್ 09, 2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. ಅಕ್ಟೋಬರ್ 09, 2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸುವವರಿಗೆ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 17,000 ದಿಂದ 28, 950 ರೂ. ತನಕ ವೇತನ ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ. ಬಿಬಿಎಂಪಿಯಲ್ಲಿ ಎರಡು ವರ್ಷಗಳಿಂದ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಎನ್‌.ಎಂ.ಆರ್‌/ ದಿನಗೂಲಿ ಅಥವಾ ಹೊರಗುತ್ತಿಗೆ ಕಾರ್ಮಿಕರಿಗೆ ಆದ್ಯತೆ ನೀಡಲಾಗುತ್ತದೆ.

ಶುಲ್ಕ ವಿನಾಯಿತಿ:
ಸಾಮಾನ್ಯ/ಓಬಿಸಿ ಅಭ್ಯರ್ಥಿಗಳಿಗೆ 200 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ. ಬೆಂಗಳೂರು ನಗರದ ಯಾವುದೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖಾ ಕಚೇರಿಗಳಲ್ಲಿ ಶುಲ್ಕ ಪಾವತಿ ಮಾಡಬಹುದು.

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರು ಈ ಲಿಂಕ್​​ http://bbmp.gov.in/ ಕ್ಲಿಕ್ ಮಾಡಿ ಅಪ್ಲಿಕೇಶನ್ ಸಲ್ಲಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

To Top