fbpx

“ಅನರ್ಹ ಶಾಸಕರಿಗೆ ಚುನಾವಣೆ ಸ್ಪರ್ಧಿಸುವ ಅವಕಾಶ ಇಲ್ಲ” ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್.

ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಅನರ್ಹಗೊಂಡೊರುವ 17 ಶಾಸಕರ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಕೇಂದ್ರ ಚುನಾವಣೆ ಆಯೋಗ ಉಪಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಇಂದಿನಿಂದಲೇ ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿದ್ದು ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ‘ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸ್ಪೀಕರ್ ತಡೆಯೊಡ್ಡಿದ್ದರಿಂದಾಗಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಬರುವುದಿಲ್ಲ. ಅಲ್ಲದೆ ಅವರ ಮರು ಪರಿಶೀಲನಾ ಅರ್ಜಿಯನ್ನು ಸಹಿತ ಸುಪ್ರೀಕೋರ್ಟ್ ಸ್ವೀಕರಿಸಿಲ್ಲ, ಆದ್ದರಿಂದಾಗಿ ಅವರು ಈ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲಿಗೆ ಅನರ್ಹ ಶಾಸಕರ ಆಸೆಗೆ ತಣೀರು ಸುರಿದಂತಾಗಿದೆ.

ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿ ಇಡೀ ಜಿಲ್ಲೆಗಳಿಗೆ ನೀತಿ ಸಂಹಿತೆ ಅನ್ವಯವಾಗಲಿದೆ. ಮಸ್ಕಿ, ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣೆ ತಕರಾರು ಅರ್ಜಿ ಇರುವ ಕಾರಣ ಉಪ ಚುನಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ನೆರೆ ಪರಿಹಾರಕ್ಕೆ ಅಡ್ಡಿ ಇಲ್ಲ ಆದರೆ, ರಾಜಕೀಯ ನಾಯಕರ ಪಾತ್ರ ಇರುವಂತಿಲ್ಲ ಎಂದು ಸಂಜೀವ್‌ ಕುಮಾರ್‌ ಸೂಚನೆ ನೀಡಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

To Top