fbpx

“ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರದ್ದು ಸಹಜ ಸಾವಲ್ಲ” ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ.

ಸಿಎಂ ಯಡಿಯೂರಪ್ಪ ಖಾಸಗಿ ಜೀವನದ ಬಗ್ಗೆ ಮತ್ತೊಮ್ಮೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದಾರೆ. ರಾಮನಗರದ ಚನ್ನಪಟ್ಟಣದಲ್ಲಿ ಮಾತನಾಡಿದ ಕುಮಾರಸ್ವಾಮಿ ಸಿಎಂ ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಅವರ ಪತ್ನಿ ಕೇವಲ ಒಂದು ಅಡಿ ಸುತ್ತಳತೆಯ ನೀರಿನ ಸಂಪಿನಲ್ಲಿ ಮುಳುಗಿ ಸತ್ತರು. ಇದನ್ನು ಏಕೆ ಯಾರೂ ಪ್ರಶ್ನೆ ಮಾಡಲಿಲ್ಲ ಎಂದು ಶಾಸಕ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

‘ಡಿಕೆಶಿ ಪರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದೇ ಇದ್ದದ್ದಕ್ಕೆ ನನ್ನನ್ನು ವಿಲನ್ ಎಂಬಂತೆ ಬಿಂಬಿಸಲಾಗಿದೆ. ಬಿಎಸ್‌ವೈ ಮುಖ್ಯಮಂತ್ರಿ ಆಗಿದ್ದಾಗ ಇಂಧನ ಇಲಾಖೆಯಲ್ಲಿ ಲೂಟಿ ಮಾಡಿದ್ದರು. ಅದನ್ನು ತನಿಖೆ ನಡೆಸುವಂತೆ ಶಿವಕುಮಾರ್‌ಗೆ ಹೇಳಿದ್ದೆ. ಆದರೆ ಅವರು ಮಾಡಲಿಲ್ಲ. ಅದೇ ಯಡಿಯೂರಪ್ಪ ಶಿವಕುಮಾರ್ ವಿರುದ್ಧ ತನಿಖೆಗೆ ಐ.ಟಿ. ಇಲಾಖೆಗೆ ಪತ್ರ‌ ಬರೆದಿದ್ದರು ಎಂದು ದೂರಿದರು.

ನನಗೆ ಬಿಡದಿಯಲ್ಲಿ ಕೃಷಿ ಭೂಮಿ ಇದೆ. ನನಗೆ ರಾಜಕೀಯ ಅವಶ್ಯಕತೆ ಇಲ್ಲ. ರಾಜಕೀಯದಿಂದ ಬೇಸತ್ತು ಹೋಗಿದ್ದೇನೆ. ನಾನು ಯಾವುದೇ ಒಂದು ಅಕ್ರಮ ಮಾಡಿಲ್ಲ. ನನ್ನ ಬಳಿ ಯಾವ ಸಿಬಿಐ, ಐಟಿ, ಇಡಿಯವರು ಬೇಕಾದರೂ ಬರಲಿ ನಾನು ಯಾರಿಗೂ ತೊಂದರೆ ಕೊಟ್ಟಿಲ್ಲ. ಜನರಿಗಾಗಿ ಇನ್ನೂ ನಾನು ರಾಜಕೀಯದಲ್ಲಿ ಇದ್ದೇನೆ ಎಂದು ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

To Top