fbpx

“ಕಾಂಗ್ರೆಸ್​ ನನ್ನ ಮೊದಲ ಶತ್ರು, ಮೈತ್ರಿ ಸರ್ಕಾರ ಅತ್ಯಂತ ಕೆಟ್ಟ ಸರ್ಕಾರ” ಬೈ ಎಲೆಕ್ಷನ್ ಘೋಷಣೆ ಬೆನ್ನಲ್ಲೇ ಮೈತ್ರಿ ಮುರಿದ ಹೆಚ್‍ಡಿಕೆ.

ರಾಜ್ಯದಲ್ಲಿ 15 ಜಿಲ್ಲೆಗಳಲ್ಲಿ ಅಕ್ಟೋಬರ್ 21ರಂದು ಬೈ ಎಲೆಕ್ಷನ್ ಘೋಷಣೆಯಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮೈತ್ರಿ ಮುರಿದಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಘೋಷಣೆಯಾಗಿದೆ. ಎಲ್ಲಾ ಕ್ಷೇತ್ರಗಳಿಗೆ ಸ್ವತಂತ್ರವಾಗಿ ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸುವುದಾಗಿ ಘೊಷಣೆ ಮಾಡಿದ್ದಾರೆ.

ಉಪ ಚುನಾವಣೆ ಘೋಷಣೆಯಾಗಿದೆ. ಎಲ್ಲಾ ಕ್ಷೇತ್ರಗಳಿಗಳಲ್ಲಿ ಜೆಡಿಎಸ್ ಏಕಾಂಗಿ ಹೋರಾಟ ನಡೆಸಲಿದೆ, ಉಪ ಚುನಾವಣೆ ಫಲಿತಾಂಶದ ಮೇಲೆ ರಾಜ್ಯದ ಮುಂದಿನ ರಾಜಕೀಯ ದಿಕ್ಕು ನಿರ್ಧಾರವಾಗುತ್ತದೆ. ಎಲ್ಲಾ ಕ್ಷೇತ್ರಗಳಿಗೆ ಸ್ವತಂತ್ರವಾಗಿ ಜೆಡಿಎಸ್ ಅಭ್ಯರ್ಥಿ ಹಾಕುತ್ತೇವೆ ಎಂದು ತಿಳಿಸಿದ್ದಾರೆ.

” ನನ್ನದು ಅತ್ಯಂತ ಕೆಟ್ಟ ಸರಕಾರವಾಗಿತ್ತು, ನನಗೆ ಯಾರ ಬೆಂಬಲವೂ ಇರಲಿಲ್ಲ. ನಾನದನ್ನು ಒಪ್ಪಿಕೊಳ್ಳುತ್ತೇನೆ. ನಾನು ಈ ಬಾರಿ ಮುಖ್ಯಮಂತ್ರಿಯಾದಾಗ ಕಣ್ಣೀರು ಹಾಕಿದೆ. ರೈತರನ್ನು ಉಳಿಸುವ ಏಕೈಕ ಉದ್ದೇಶಕ್ಕಾಗಿ ಮಾತ್ರ ಕಾಂಗ್ರೆಸ್ ಜೊತೆ ಸರಕಾರ ರಚನೆ ಮಾಡಿದೆ. ಸಾಲ ಮನ್ನಾ ಮಾಡಿ ನನ್ನ ಮಾತು ಉಳಿಸಿಕೊಂಡಿದ್ದೇನೆ” ಎಂದರು.

ಕಾಂಗ್ರೆಸ್‌ಗೆ ಬಿಜೆಪಿಗಿಂತ ಮೊದಲು ಜೆಡಿಎಸ್ ಅತಿದೊಡ್ಡ ಶತ್ರು. ನಮ್ಮ ಪಕ್ಷವನ್ನು ಮುಗಿಸಲು ಕಾಂಗ್ರೆಸ್‌ನ ಹಲವು ನಾಯಕರು ಯತ್ನಿಸುತ್ತಿದ್ದಾರೆ, ಆದರೆ ಕಾಂಗ್ರೆಸ್-ಜೆಡಿಎಸ್ ನಡುವಿನ ಕಿತ್ತಾಟ ಬಿಜೆಪಿಗೆ ಸಹಕಾರಿಯಾಗುವುದಿಲ್ಲ ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

To Top