fbpx

“ರಾಜ್ಯದ ನೆರೆ ಪರಿಹಾರಕ್ಕೆ ಕೇಂದ್ರದ ನೆರವಿನ ಅವಶ್ಯಕತೆ ಇಲ್ಲ” ತೇಜಸ್ವಿ ಸೂರ್ಯ.

14ನೇ ಹಣಕಾಸು ಆಯೋಗದ ಶಿಪಾರಸ್ಸಿನ ಪ್ರಕಾರ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚಿನ ಆರ್ಥಿಕ ಶಕ್ತಿಯನ್ನು ನೀಡಿದೆ ಆದುದರಿಂದ ನರೆ ಸಂತ್ರಸ್ಥರ ಪುನರ್ವಸತಿಗೆ ರಾಜ್ಯ ಸರ್ಕಾರ ಪರಿಹಾರಕ್ಕಾಗಿ ಕೇಂದ್ರದ ಮೊರೆ ಹೋಗುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಪ್ರಧಾನಿ ನರೇಂದ್ರ ಮೋದಿ 14ನೇ ಹಣಕಾಸು ಆಯೋಗ ಜಾರಿ ಸಂದರ್ಭದಲ್ಲಿ ಎಲ್ಲರಾಜ್ಯಗಳಿಗೆ ಹೆಚ್ಚಿನ ಅನುದಾನ ಮೀಸಲಿರಿಸಿ ಆರ್ಥಿಕ ಶಕ್ತಿ ನೀಡಿದ್ದಾರೆ. ಆರ್ಥಿಕವಾಗಿ ಸದೃಢವಾಗಿರುವ ರಾಜ್ಯ ಸರಕಾರ ಈಗಾಗಲೇ ಸಂತ್ರಸ್ತರಿಗೆ ನೆರೆ ಪರಿಹಾರ ಘೋಷಿಸಿದೆ” ಎಂದರು.

ನಮ್ಮ ರಾಜ್ಯ ಸರ್ಕಾರ ಆರ್ಥಿಕ ಸದೃಡವಾಗಿದೆ. ಆದುದರಿಂದ ಉತ್ತರ ಕರ್ನಾಟಕದ ನೆರೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರದಿಂದಲೇ ಸಿಎಂ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.ಈ ವಯಸ್ಸಿನಲ್ಲೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ವಿರೋಧ ಪಕ್ಷಗಳ ಆರೋಪ ಅರ್ಥಹೀನ ಎಂದು ಹೇಳಿದರು.

‘ಪ್ರವಾಹವನ್ನೇ ನೆಪವಾಗಿಟ್ಟುಕೊಂಡು ಕಾಂಗ್ರೆಸ್ ‌ನಾಯಕರು ರಾಜಕೀಯ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೇ ಹಣ ನೀಡುತ್ತಿದೆ. ಕೇಂದ್ರವೇ ಘೋಷಿಸಬೇಕೆಂಬ ಹಠ ಕಾಂಗ್ರೆಸ್‌ನವರಿಗೇಕೆ? ಹಾನಿಯ ವರದಿ ಸಲ್ಲಿಸಲಾಗಿದ್ದು, ಕೇಂದ್ರವೂ ಸ್ಪಂದಿಸುವ ಭರವಸೆ ಇದೆ‌. ಎರಡೂ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡುತ್ತಿವೆ’ ಎಂದು ಪ್ರತಿಕ್ರಿಯಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

To Top