fbpx

ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದ ರಾಧಿಕಾ ಕುಮಾರಸ್ವಾಮಿ: ಹೇಳಿದ್ದೇನು?

ಸ್ಯಾಂಡಲ್ ವುಡ್ ಸ್ವೀಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ದಮಯಂತಿ’ ಬಿಡುಗಡೆಗೆ ರೆಡಿಯಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಈ ಸಿನಿಮಾ ತೆರೆ ಕಾಣುತ್ತಿದ್ದು ನವರಸನ್ ಈ ಸಿನಿಮಾಕ್ಕೆ ನಿರ್ದೇಶನ ಮಾಡಿದ್ದಾರೆ. ಸದ್ಯ ‘ದಮಯಂತಿ’ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ನಡುವೆ ‘ದಮಯಂತಿ’ ಚಿತ್ರದ ಟೀಸರ್​ ಸಮಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ರಾಧಿಕಾ, ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಕೆಲ ದಿನಗಳ ಹಿಂದೆ ರಾಧಿಕಾ ರಾಜಕೀಯಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.

ಸಿನಿಮಾ ಅಂದ್ರೆ ತಂದೆ ತಾಯಿಗೂ ತುಂಬ ಇಷ್ಟ. ಎಷ್ಟು ದಿನ ಸಿನಿಮಾ ಮಾಡಲು ಸಾಧ್ಯನೋ ಅಷ್ಟು ದಿನ ಸಿನಿಮಾಗಳನ್ನು ಮಾಡುತ್ತೇನೆ. ನಾಯಕಿಯಾಗಲು ಸಾಧ್ಯವಾಗದಿದ್ದರೆ ಸಿನಿಮಾ ನಿರ್ಮಾಣ ಮಾಡುತ್ತೇನೆ. ನನಗೆ ನಾಯಕಿಯಾಗಲು ಸಾಧ್ಯವಾಗದಿದ್ದರೆ, ನಿರ್ಮಾಪಕಿಯಾಗಿ ಚಿತ್ರರಂಗದಲ್ಲಿ ಮುಂದುವರೆಯುತ್ತೇನೆ. ಪೊಲಿಟಿಕ್ಸ್​ಗೆ ಬರುವ ಯಾವುದೇ ಉದ್ದೇಶವಿಲ್ಲ” ಎಂದು ಹೇಳಿದ್ದಾರೆ. ಈ ಮೂಲಕ ರಾಜಕೀಯ ಎಂಟ್ರಿಯ ಬಗ್ಗೆ ಇದ್ದ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

To Top