ತಾಮ್ರದ ಪಾತ್ರೆಯಲ್ಲಿ ಶೇಖರಿಸಿದ ನೀರು ಕುಡಿದರೆ ಆರೋಗ್ಯದ ಜೊತೆಗೆ ಸುಖ, ಸಂಪತ್ತು ಲಭಿಸಲಿದೆ ಮತ್ತು ತಾಮ್ರದ ಪಾತ್ರೆಯಲ್ಲಿಟ್ಟ ನೀರು ಅಮೃತಕ್ಕೆ ಸಮಾನ ಎನ್ನುವುದನ್ನು ಶಾಸ್ತ್ರದಲ್ಲಿಯೇ ಹೇಳಲಾಗಿದೆ. ಹಲವಾರು ವೈಜ್ಞಾನಿಕ ಸಂಶೋಧನೆಗಳಿಂದ ತಾಮ್ರದ ಪಾತ್ರೆಯಲ್ಲಿ ಶೇಖರಿಸಿದ ನೀರು ಆರೋಗ್ಯಕ್ಕೆ ಪಥ್ಯಕರ ಎಂಬುದು ಸಾಬೀತಾಗಿದೆ. ರಾತ್ರಿ ತಾಮ್ರದ ಪಾತ್ರೆ ಅಥವಾ ಚಂಬಿನಲ್ಲಿ ನೀರನ್ನು ಶೇಖರಣೆ ಮಾಡಿ, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಲಾಭ.
ಪಚನಕ್ರಿಯೆಯನ್ನು ಉತ್ತಮಗೊಳಿಸುತ್ತದೆ.
ದೇಹದ ತೂಕದ ಪ್ರಮಾಣವನ್ನು ಇಳಿಸಲು ಸಹಕಾರಿ.
ದೇಹದ ಮೇಲಿನ ಗಾಯವನ್ನು ಬೇಗ ಗುಣಪಡಿಸುತ್ತದೆ.
ಮಲಬದ್ಧತೆ, ಹೃದಯ ಸಂಬಂಧಿ ಕಾಯಿಲೆಗಳನ್ನು ನಿಯಂತ್ರಿಸುತ್ತದೆ.
ನೀರಿನಲ್ಲಿರುವ ವಿಷಾಣುಗಳನ್ನು ಕೊಲ್ಲುತ್ತದೆ.
ಥೈರಾಡ್ ಸಮಸ್ಯೆಗಳನ್ನು ನಿವಾರಿಸುತ್ತದೆ.
ಚರ್ಮ ಆರೋಗ್ಯಕರವಾಗಿರುವಂತೇ ಮಾಡುತ್ತದೆ.
ಮೆದುಳು ಚುರುಕಾಗುತ್ತದೆ. ನೆನಪಿಗೆ ಶಕ್ತಿ ಬೆಳವಣಿಗೆಗೂ ಸಹಕಾರಿ.
ಪ್ರತಿನಿತ್ಯ ತಾಮ್ರದ ಪಾತ್ರೆಯಲ್ಲಿ ಶೇಖರಿಸಿದ ನೀರನ್ನು ಉಪಯೋಗಿಸುವುದರಿಂದ ಮೂಳೆಗಳು ಗಟ್ಟಿಯಾಗಿ, ಆರೋಗ್ಯವಾಗಿರುತ್ತವೆ.
ಮೂತ್ರಪಿಂಡದ ಸಮಸ್ಯೆಗಳನ್ನು ದೂರ ಮಾಡುತ್ತದ.
ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ತೆಗೆದುಹಾಕುವಲ್ಲಿ ಸಹಾಯ ಮಾಡುತ್ತದೆ.
ಸಂಧಿವಾತ ಮತ್ತು ಇತರ ಕೀಲುನೋವುಗಳ ನಿವಾರಣೆಯಲ್ಲಿ ತಾಮ್ರ ಸಹಾಯಮಾಡುತ್ತದೆ.
ಚಿಕ್ಕವಯಸ್ಸಿನಲ್ಲಿ ಕೂದಲು ಬಿಳಿಯಾಗುವುದು, ಚರ್ಮ ಸುಕ್ಕುಗಟ್ಟುವುದು, ವಯಸ್ಸಾದಂತೆ ಕಾಣುವುದು ಮುಂತಾದ ಸಮಸ್ಯೆಗಳು ಬರದಂತೆ ತಡೆಯುತ್ತದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
