fbpx
ಕಥೆ

ಹಿಂದೂ ಧರ್ಮದ ವೀರ ಸನ್ಯಾಸಿ “ಸ್ವಾಮಿ ವಿವೇಕಾನಂದ” ಸಂಕ್ಷಿಪ್ತ ಜೀವನ ಚರಿತ್ರೆ.

ಹಿಂದೂ ಧರ್ಮದ ವೀರ ಸನ್ಯಾಸಿ “ಸ್ವಾಮಿ ವಿವೇಕಾನಂದ” ಸಂಕ್ಷಿಪ್ತ ಜೀವನ ಚರಿತ್ರೆ.

ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ – ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ “ಯುವದಿನ”ವೆಂದು ಆಚರಿಸಲಾಗುತ್ತದೆ.

%e0%b2%b5%e0%b2%bf%e0%b2%b5%e0%b3%86%e0%b2%95%e0%b2%be%e0%b2%a8%e0%b2%82%e0%b2%a6

ಜನನ

ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು ೧೮೬೩, ಜನವರಿ ೧೨ರಂದು ಕಲ್ಕತ್ತೆಯಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ‘ವಿವೇಕಾನಂದ’ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು. ‍

ರಾಮಕೃಷ್ಣರ ಜೊತೆಗೆ

*ನರೇಂದ್ರರಿಗೆ ರಾಮಕೃಷ್ಣರ ಮೊದಲ ಪರಿಚಯ ವಿಲಿಯಮ್ ಹೆಸ್ಟಿಯವರ ತರಗತಿಯಲ್ಲಿ. ಹೆಸ್ಟಿಯವರು ವಿಲಿಯಮ್ ವರ್ಡ್ಸ್ವವರ್ತ್ ಅವರ “ದ ಎ‍ಕ್ಸಕರ್ಶನ್” ಎಂಬ ಕವಿತೆಯಲ್ಲಿನ “ಸಮಾಧಿ” ಪದವನ್ನು ವಿವರಿಸುವಾಗ ಸಮಾಧಿಯ ನಿಜವಾದ ಅರ್ಥ ತಿಳಿಯಲು ದಕ್ಷಿಣೇಶ್ವರದ ರಾಮಕೃಷ್ಣರನ್ನೊಮ್ಮೆ ಭೇಟಿ ನೀಡಿ ಎಂದು ಸಲಹೆ ಇತ್ತರು. ಇವರ ಸಲಹೆಯ ಮೇರೆಗೆ ಹಲವಾರು ವಿದ್ಯಾರ್ಥಿಗಳು ರಾಮಕೃಷ್ಣರನ್ನು ನೋಡಲು ಉತ್ಸುಕರಾದರು. ಆವರಲ್ಲಿ ನರೇಂದ್ರರೂ ಒಬ್ಬರು.

swami-vivekananda-indian-spiritual-leader

*೧೮೮೧ನೇ ಇಸವಿ ನವೆಂಬರದಲ್ಲಿ ಎಫ್.ಎ(ಲಲಿತಕಲೆ)ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಾಗ, ರಾಮಚಂದ್ರದತ್ತರು ರಾಮಕೃಷ್ಣರು ಪ್ರವಚನ ನಡೆಸುತ್ತಿದ್ದರು ಸುರೇಂದ್ರನಾಥ ಮಿತ್ರರ ಮನೆಗೆ ಕರೆದರು. ಅಲ್ಲಿ ರಾಮಕೃಷ್ಣರು ನರೇಂದ್ರನಿಗೆ ಹಾಡಲು ಕೇಳಿಕೊಂಡರು. ಅವರ ಗಾಯನ ಪ್ರತಿಭೆಯನ್ನು ಮೆಚ್ಚಿ ರಾಮಕೃಷ್ಣರು ನರೆಂದ್ರನನ್ನು ದಕ್ಷಿಣೇಶ್ವರಕ್ಕೆ ಬರಲು ಆಮಂತ್ರಿಸಿದರು. ಆದರೆ ನರೇಂದ್ರರು ಅದರ ಬಗ್ಗೆ ಉತ್ಸಾಹ ತೊರಿಸಲಿಲ್ಲ.

swami-vivekanand-ji

*೧೮೮೨ ರಲ್ಲಿ ನರೇಂದ್ರರು ತನ್ನ ಇಬ್ಬರು ಗೆಳೆಯರೊಂದಿಗೆ ರಾಮಕೃಷ್ಣರನ್ನು ಭೇಟಿ ಮಾಡಲು ದಕ್ಷಿಣೇಶ್ವರಕ್ಕೆ ಹೋದರು. ರಾಮಕೃಷ್ಣರ ಆ ಭೇಟಿ ಅವರ ಜೀವನಕ್ಕೆ ಮಹತ್ವದ ತಿರುವನ್ನು ಕೊಟ್ಟಿತು. ಆದರೂ ನರೇಂದ್ರರು ರಾಮಕೃಷ್ಣರನ್ನು ಗುರುಗಳನ್ನಾಗಿ ಒಪ್ಪಿಕೊಳ್ಳಲಿಲ್ಲ. ರಾಮಕೃಷ್ಣರ ಆಲೋಚನೆಗಳನ್ನು ಒಪ್ಪಿಕೊಳ್ಳದಿದ್ದರೂ, ಅವರ ಮಗುವಿನಂಥ ವ್ಯಕ್ತಿತ್ವ ಅವರನ್ನು ಪದೇ ಪದೇ ದಕ್ಷಿಣೀಶ್ವರಕ್ಕೆ ಭೇಟಿ ನೀಡಲು ಪ್ರೇರೇಪಿಸಿತು.

%e0%b2%b5%e0%b2%bf%e0%b2%b5%e0%b3%86%e0%b2%95%e0%b2%be%e0%b2%a8%e0%b2%82%e0%b2%a6-3

*ನರೇಂದ್ರರು ತಮ್ಮ ಆಧ್ಯಾತ್ಮಿಕ ವಿಧ್ಯಾಭ್ಯಾಸವನ್ನು ಮುಂದುವರಿಸಿದರು. ಅವರು ಕೊಸ್ಸಿಪುರದಲ್ಲಿ ನಿರ್ವಿಕಲ್ಪ ಸಮಾಧಿಯನ್ನು ಅನುಭವಿಸಿದರು. ನರೇಂದ್ರ ಮತ್ತು ರಾಮಕೃಷ್ಣರ ಇತರ ಶಿಷ್ಯರು ಗುರುಗಳ ಅದೇಶದಂತೆ ಅವರಂತೆ ನಿಲುವಂಗಿ ಮತ್ತು ಕಾವಿ ತೊಟ್ಟುಕೊಂಡರು. ಜನ ಸೇವೆಯೇ ಜನಾರ್ದನನ ಸೇವೆ ಎಂದರು. ರಾಮಕೃಷ್ಣರು ನರೇಂದ್ರರನ್ನು ತಮ್ಮ ಶಿಷ್ಯವೃಂದದ ನಾಯಕರನ್ನಾಗಿ ನೇಮಿಸಿದರು. ರಾಮಕೃಷ್ಣರು ೧೮೮೬, ಆಗಸ್ಟ ೧೬ ರಂದು ನಿಧನ ಹೊಂದಿದರು.

ರಾಮಕೃಷ್ಣ ಮಠದ ಸ್ಥಾಪನೆ

*ರಾಮಕೃಷ್ಣರ ಮರಣಾ ನಂತರ ಅವರ ಮಠಕ್ಕೆ ಬರುವ ಆದಾಯವು ಕಡಿಮೆಯಾಯಿತು. ಇದರಿಂದಾಗಿ ಅವರು ಬೇರೆ ಜಾಗವನ್ನು ಹುಡುಕಬೇಕಾಯಿತು. ಬಾರನಗರದಲ್ಲಿ ನರೇಂದ್ರರು ಶಿಥಿಲವಾದ ಮನೆಯನ್ನು ಖರೀದಿಸಿ, ಆ ಮನೆಯನ್ನು ಅವರು ಮಠವನ್ನಾಗಿ ಪರಿವರ್ತಿಸಲು ಆಲೋಚಿಸಿ ದರು. ಆ ಮನೆಯ ಬಾಡಿಗೆಯನ್ನು ಭಿಕ್ಷಾಯಾಟನೆ ಮೂಲಕ ತುಂಬುತಿದ್ದರು.

ramakrishna-vivekananda-center

*ಈ ಮನೆಯೆ ರಾಮಕೃಷ್ಣರ ಮಠದ ಮೊದಲ ಶಾಖೆಯಾಯಿತು. ಅಲ್ಲಿ ನರೇಂದ್ರ ಮತ್ತು ಅವರ ಶಿಷ್ಶರು ಹೆಚ್ಚಿನ ಸಮಯವನ್ನು ಧ್ಯಾನ ಮತ್ತು ಧಾರ್ಮಿಕ ವಿಷಯಗಳನ್ನು ಅಭ್ಯಾಸ ಮಾಡುವಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದರು. ಮುಂದಿನ ಆ ದಿನಗಳನ್ನು ನೆನೆಸುತ್ತಾ “ಪ್ರತಿದಿನ ಬೆಳಿಗ್ಗೆ ೩ ರಿಂದ ರಾತ್ರಿಯವರೆಗು ನಾವು ಧ್ಯಾನದಲ್ಲೆ ಕಳೆಯುತ್ತಿದ್ದೆವು.

birthday-celebration-photo-gallery-1-of-sri-ramakrishna-at-belur-math-on-6-march-2011-100

*ಜಗತ್ತಿನ ಪರಿವೆಯೆ ಇಲ್ಲದೆ, ನಮ್ಮ ಸಾಧನಾ ಪ್ರಪಂಚದಲ್ಲಿ ಮುಳುಗಿದ್ದೆವು” ೧೮೮೧ ನೇ ಇಸವಿಯಲ್ಲಿ ನರೇಂದ್ರರು ವೈಷ್ಣವ ಚರಣ್ ಬಾಸ್ಕರವರ ಜೊತೆ ಬಂಗಾಳಿ ಭಾಷೆಯ ಕವಿತೆಗಳನ್ನೊಳಗೊಂಡ “ಸಂಗೀತ ಕಲ್ಪತರು “ಎಂಬ ಪುಸ್ತಕವನ್ನು ಸಂಗ್ರಹಿಸಿದರು. ಆದರೆ ಹಲವು ಸಮಸ್ಯೆ ಗಳಿಂದ ಅದನ್ನು ಪ್ರಕಟಿಸಲಾಗಲಿಲ್ಲ.

ವಿವೇಕಾನಂದರ ಭಾರತ ಪರ್ಯಟನೆ

%e0%b2%b5%e0%b2%bf%e0%b2%b5%e0%b3%87%e0%b2%95%e0%b2%be%e0%b2%a8%e0%b2%82%e0%b2%a6%e0%b2%b0-%e0%b2%ad%e0%b2%be%e0%b2%b0%e0%b2%a4-%e0%b2%aa%e0%b2%b0%e0%b3%8d%e0%b2%af%e0%b2%9f%e0%b2%a8%e0%b3%86

೧೮೮೮ ನರೇಂದ್ರರು ಭಾರತ ಪರ್ಯಟನೆಗೆ ಹೊರಟರು. ಅವರು ಪರ್ಯಟನೆಗೆ ಹೋಗುವಾಗ ಅವರ ಜೊತೆಗೆ ಕಮಂಡಲು ದಂಡ ಮತ್ತು ಅವರಿಗೆ ಪ್ರಿಯವಾದ ಭಗವತ್ ಗೀತೆ ಹಾಗು ” ದಿ ಇಮಿಟೆಶ್ನ್ ಒಫ಼್ ಕ್ರಿಸ್ತ್” ಎಂಬೆರಡು ಪುಸ್ತಕಗಳನ್ನು ತಮ್ಮ ಜೊತೆಗೆ ಒಯ್ಯುತ್ತಿದ್ದರು. ನರೇಂದ್ರರು ಸತತವಾಗಿ ಐದು ವರ್ಷಗಳ ಕಾಲ ಭಾರತವನ್ನು ಸಂಚರಿಸಿದರು.

ಅದ್ವೈತ ಸಿದ್ಧಾಂತದ ಉಪಯುಕ್ತತೆ

%e0%b2%85%e0%b2%a6%e0%b3%8d%e0%b2%b5%e0%b3%88%e0%b2%a4-%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%be%e0%b2%82%e0%b2%a4%e0%b2%a6-%e0%b2%89%e0%b2%aa%e0%b2%af%e0%b3%81%e0%b2%95%e0%b3%8d%e0%b2%a4

ಕೇವಲ ರಾಮಕೃಷ್ಣ ಪರಮಹಂಸರ ಶಿಷ್ಯರಾಗದೆ ತಮ್ಮದೇ ಶೈಲಿಯಲ್ಲಿ ದೊಡ್ಡ ಚಿಂತಕರಾಗಿ ವಿವೇಕಾನಂದರು ಹೆಸರು ಪಡೆದಿದ್ದಾರೆ. ಅವರ ಮುಖ್ಯ ಕಾಣಿಕೆಯೆಂದರೆ ಕೇವಲ ತಾತ್ವಿಕವಾಗಿ ಉಚ್ಚ ತತ್ತ್ವಜ್ಞಾನ ಮಾತ್ರವಲ್ಲದೆ ಸಾಮಾಜಿಕ ಹಾಗೂ ರಾಜಕೀಯ ದೃಷ್ಟಿಯಿಂದಲೂ ಉಪಯುಕ್ತ ಎಂಬುದನ್ನು ತೋರಿಸಿಕೊಟ್ಟರು. ಅವರ ಅಭಿಪ್ರಾಯದಂತೆ, ರಾಮಕೃಷ್ಣರಿಂದ ಅವರು ಪಡೆದ ಮುಖ್ಯ ಬೋಧನೆಗಳಲ್ಲಿ ಒಂದೆಂದರೆ ಎಲ್ಲರಲ್ಲಿಯೂ ದೇವರಿದ್ದಾನೆ ಎಂಬುದು.

ವಿವೇಕಾನಂದರ ವಿಶ್ವಪರ್ಯಟನೆ

swami-vivekananda-parliament-of-religions

ವಿವೇಕಾನಂದರು ಭಾರತದ ತತ್ವಜ್ಞಾನ, ಯೋಗ, ವೇದಾಂತ ಇವೆಲ್ಲವನ್ನು ಪಾಶ್ಚಿಮಾತ್ಯದೇಶಗಳಲ್ಲಿ ಪ್ರಚಾರ ಮಾಡಿದರು. ಅವರು ತಮ್ಮ ಗುರುಗಳ ಒಳ್ಳಯ ಮನೋಭಾವದ ಕಡೆಗೆ ವಾಲಿದರು. ಅವರು ಸನ್ಯಾಸಿಯಾಗಿ ದೇವರಸೇವೆ ಹೇಗೆ ಮಾಡ ಬಹುದಂದು ನಿರೂಪಿಸಿದರು. ಗುರು ರಾಮಕೃಷ್ಣರ ಮರಣಾ ನಂತರ ವಿವೇಕಾನಂದರು ಭಾರತ ಪ್ರವಾಸ ಕೈಗೊಂಡರು.

ಸರ್ವಧರ್ಮಸಮ್ಮೇಳನದಲ್ಲಿ ಮಾಡಿದ ಭಾಷಣ

%e0%b2%b5%e0%b2%bf%e0%b2%b5%e0%b3%87%e0%b2%95%e0%b2%be%e0%b2%a8%e0%b2%82%e0%b2%a6%e0%b2%b0-%e0%b2%b5%e0%b2%bf%e0%b2%b6%e0%b3%8d%e0%b2%b5%e0%b2%aa%e0%b2%b0%e0%b3%8d%e0%b2%af%e0%b2%9f%e0%b2%a8%e0%b3%86

ಸರ್ವಧರ್ಮಸಮ್ಮೇಳನ, ದ ಭಾಷಣದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸಿದ್ಧಾಂತಗಳು, ಮಿಂಚಿನಂತೆ ಅಲ್ಲಿನ ಜನರನ್ನು ಆಕರ್ಶಿಸಿದವು. ವಿವೇಕಾನಂದರ ಅತಿ ಪ್ರಸಿದ್ಧ ಯಶಸ್ಸು೧೮೯೩ ರಲ್ಲಿ ಶಿಕಾಗೊ ನಗರದಲ್ಲಿ ನಡೆದ ಪ್ರಪಂಚ ಮತಗಳ ಸಂಸತ್ತಿನಲ್ಲಿ ಬಂದಿತು. ಅವರ ಭಾಷಣದಲ್ಲಿ ಮೊದಲ ವಾಕ್ಯವಾಗಿದ್ದ “ಅಮೆರಿಕದ ಸಹೋದರ ಸಹೋದರಿಯರೇ” ಎಂಬ ವಾಕ್ಯ ಚಿರಸ್ಮರಣೀಯವಾಗಿದೆ.

%e0%b2%b5%e0%b2%bf%e0%b2%b5%e0%b3%87%e0%b2%95%e0%b2%be%e0%b2%a8%e0%b2%82%e0%b2%a6%e0%b2%b0-%e0%b2%b5%e0%b2%bf%e0%b2%b6%e0%b3%8d%e0%b2%b5%e0%b2%aa%e0%b2%b0%e0%b3%8d%e0%b2%af%e0%b2%9f%e0%b2%a8%e0%b3%861

ಈ ಸಂದರ್ಭದಲ್ಲಿಯೇ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಹಿಂದೂ ಧರ್ಮದ ಬಗೆಗೆ ಆಸಕ್ತಿಯನ್ನೂ ಕೆರಳಿಸಿದರು. ‘ಪೂರ್ವ ದೇಶದ ವಿಚಿತ್ರ ಧರ್ಮ’ ಎಂದು ಪರಿಗಣಿತವಾಗಿದ್ದ ಹಿಂದೂ ಧರ್ಮದ ತಾತ್ವಿಕ ಹಾಗೂ ಧಾರ್ಮಿಕ ಮೂಲಭೂತ ಮಹತ್ವವುಳ್ಳ ಸಂಪ್ರದಾಯಗಳು, ಪಾಶ್ಚಾತ್ಯ ರಾಷ್ಟ್ರಗಳಲ್ಲಿಯೂ ಗುರುತಿಸಲ್ಪಟ್ಟವು. ಈ ಸಂದರ್ಭದ ಕೆಲವೇ ವರ್ಷಗಳಲ್ಲಿ ‘ನ್ಯೂಯಾರ್ಕ್’ ಮತ್ತು ‘ಲಂಡನ್’ ನಗರಗಳಲ್ಲಿ ವೇದಾಂತ ಕೇಂದ್ರಗಳನ್ನು ಸ್ಥಾಪಿಸಿ ಅನೇಕ ವಿಶ್ವವಿದ್ಯಾಲಯಗಳಲ್ಲಿ ಭಾಷಣಗಳನ್ನು ಮಾಡಿದರು.

%e0%b2%9a%e0%b2%bf%e0%b2%95%e0%b3%8d%e0%b2%af%e0%b2%be%e0%b2%97%e0%b3%8b-%e0%b2%b8%e0%b2%aa%e0%b3%8d%e0%b2%9f%e0%b3%86%e0%b2%82%e0%b2%ac%e0%b2%b0%e0%b3%8d-%e0%b3%a7%e0%b3%ae%e0%b3%af%e0%b3%a9-2

ಸ್ವದೇಶ ಮಂತ್ರ

ಆರ್ಯಮಾತೆಯ ಅಮೃತಪುತ್ರರಿರಾ, ಮರೆಯದಿರಿ, ನಿಮ್ಮ ಸ್ತ್ರೀಯರ ಆದರ್ಶ ಸೀತಾ, ಸಾವಿತ್ರಿ, ದಮಯಂತಿಯರು. ಮರೆಯದಿರಿ, ನೀವು ಪೂಜಿಸುವ ಜಗದೀಶ್ವರನು ತ್ಯಾಗಿಕುಲ ಚೂಡಾಮಣಿ, ಉಮಾವಲ್ಲಭ ಶಂಕರ. ಮರೆಯದಿರಿ, ನಿಮ್ಮ ವಿವಾಹ, ನಿಮ್ಮ ಐಶ್ವರ್ಯ, ನಿಮ್ಮ ಜೀವನ ಬರಿಯ ಇಂದ್ರಿಯ ಭೋಗಕ್ಕಲ್ಲ, ವ್ಯಕ್ತಿಗತ ಸುಖಕ್ಕಲ್ಲ. ಮರೆಯದಿರಿ, ನಿಮ್ಮ ಜನ್ಮವಿರುವುದೇ ಜಗನ್ಮಾತೆಯ ಅಡಿದಾವರೆಗಳಲ್ಲಿ ಬಲಿದಾನಕ್ಕಾಗಿ!

swamivivekananda3

ಮರೆಯದಿರಿ, ನಿಮ್ಮ ಸಾಮಾಜಿಕ ರಚನೆ ಅನಂತ ವಿಶ್ವವ್ಯಾಪಿ ಜಗಜ್ಜನನಿಯ ಕಾಂತಿಯನ್ನು ಪ್ರತಿಬಿಂಬಿಸುವುದಕ್ಕಾಗಿ ಇರುವುದು. *ಮರೆಯದಿರಿ, ಅಂತ್ಯಜರು, ಮೂಢರು, ದರಿದ್ರರು, ನಿರಕ್ಷರಕುಕ್ಷಿಗಳು, ಚಂಡಾಲರು ಮತ್ತು ಚಮ್ಮಾರರು – ಎಲ್ಲರೂ ನಿಮ್ಮ ರಕ್ತಬಂಧುಗಳಾದ ಸಹೋದರರು ! ವೀರಾತ್ಮರೇ, ಧೀರರಾಗಿ, ನೆಚ್ಚುಗೆಡದಿರಿ. ಭಾರತೀಯರು ನಾವು ಎಂದು ಹೆಮ್ಮೆ ತಾಳಿ. ಸಾರಿ ಹೇಳಿ, ಭಾರತೀಯರು ನಾವು, ಭಾರತೀಯರೆಲ್ಲ ನಮ್ಮ ಸಹೋದರರು.

%e0%b2%b5%e0%b2%bf%e0%b2%b5%e0%b3%87%e0%b2%95%e0%b2%be%e0%b2%a8%e0%b2%82%e0%b2%a64

ಸಾರಿ ಹೇಳಿ, ಮೂರ್ಖ ಭಾರತೀಯರೂ ನಮ್ಮ ಸಹೋದರರು, ಬ್ರಾಹ್ಮಣ ಭಾರತೀಯರೆಮ್ಮ ಸಹೋದರರು, ಪಂಚಮ ಭಾರತೀಯರೆಮ್ಮ ಸಹೋದರರು. ನೀವು ಒಂದು ಚಿಂದಿಬಟ್ಟೆಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದರೂ ಕೂಡ, ಅಭಿಮಾನಪೂರ್ವಕವಾಗಿ ದಿಕ್‌ತಟಗಳು ಅನುರಣಿತವಾಗುವಂತೆ ತಾರಸ್ವರದಿಂದ ಸಾರಿ ಹೇಳಿ “ಭಾರತೀಯರು ನಮ್ಮ ಸಹೋದರರು, ಭಾರತೀಯರು ನಮ್ಮ ಪ್ರಾಣ. ಭಾರತೀಯ ದೇವ ದೇವತೆಗಳೆಲ್ಲರೂ ನಮ್ಮ ದೇವರು. ಭಾರತೀಯ ಸಮಾಜ, ನಮ್ಮ ಬಾಲ್ಯದ ತೊಟ್ಟಿಲು, ತಾರುಣ್ಯದ ನಂದನವನ, ವೃದ್ಧಪ್ಯದ ವಾರಾಣಸಿ”. ಸಹೋದರರೆ, ಹೀಗೆ ಸಾರಿ “ಭಾರತ ಭೂಮಿಯೆ ನಮ್ಮ ಪರಂಧಾಮ. ಭಾರತದ ಶುಭವೆ ನಮ್ಮ ಶುಭ.” ಹಗಲೂ ರಾತ್ರಿಯೂ ಇದು ನಿಮ್ಮ ಪ್ರಾರ್ಥನೆಯಾಗಲಿ, “ಹೇ ಗೌರೀನಾಥ, ಹೇ ಜಗನ್ಮಾತೆ, ಪೌರುಷವನ್ನು ಎಮಗೆ ದಯಪಾಲಿಸು. ಹೇ ಸರ್ವಶಕ್ತಿಶಾಲಿನಿ, ನಮ್ಮ ದೌರ್ಬಲ್ಯವನ್ನು ದಹಿಸು. ಕ್ಲೈಬ್ಯವನ್ನು ಹೋಗಲಾಡಿಸು. ನಮ್ಮ ಷಂಡತನವನ್ನು ಹೋಗಲಾಡಿಸಿ, ನಮ್ಮಲ್ಲಿ ವೀರತ್ವವನ್ನು ತುಂಬು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top