fbpx
ಸಮಾಚಾರ

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ನೀಡಿದ ಪಲಾವ್ ತಿಂದು ಸಾವಪ್ಪಿದ ನೂರಕ್ಕೂ ಹೆಚ್ಚು ಕುರಿಗಳು.

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ನೀಡಿದ ಪಲಾವ್ ತಿಂದು ಸಾವಪ್ಪಿದ ನೂರಕ್ಕೂ ಹೆಚ್ಚು ಕುರಿಗಳು.

 

 

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರ್ಯಕ್ರಮದಲ್ಲಿ ನೀಡಿದ್ದ ಅನ್ನವನ್ನು ತಿಂದು ನೂರಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಸೆಪ್ಟೆಂಬರ್ 22ರಂದು ಕೊಪ್ಪಳ ಜಿಲ್ಲೆಯ ಹೊರವಲಯವಾದ ಹೊಸಪೇಟೆ ರೋಡ್ ನಲ್ಲಿ ರಾಜ್ಯದ ವಿವಿಧ ಅಭಿವೃದ್ದಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಬಂದಿದ್ದರು. ಆ ಜನರಿಗಾಗಿ ಟನ್‍ಗಟ್ಟಲೆ ಪಲಾವ್ ಮಾಡಿ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

 

 

ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನರು ಪಲಾವ್ ತಿಂದು ಪ್ಲೇಟ್‍ಗಳು ಹಾಗೂ ಉಳಿದ ಪಲಾವನ್ನು ಅಲ್ಲಲ್ಲೇ ಬಿಸಾಡಿ ಹೋಗಿದ್ದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಿರಗಾಂ ಗ್ರಾಮದ ಸೋಮಣ್ಣ ಪೂಜಾರ ಎಂಬ ಬಡ ರೈತನ ನೂರಕ್ಕೂ ಹೆಚ್ಚು ಕುರಿಗಳು ಅಲ್ಲಿ ಬಿಸಾಡಿದ್ದ ಮಿಕ್ಕಿದ್ದ ಪಲಾವನ್ನು ತಿಂದು ನಿರಂತರವಾಗಿ ಸಾವಿಗೀಡಾಗಿವೆ. ಸೋಮಣ್ಣನವರ ಬಳಿ ಒಟ್ಟು 200 ಕುರಿಗಳಿದ್ದವು ಆದರೀಗ ಅರ್ಧದಷ್ಟು ಕುರಿಗಳು ಸಾವನ್ನಪ್ಪಿರುವ ಕಾರಣ ಕುರಿಗಳನ್ನೇ ನಂಬಿಕೊಂಡು ಊರು ಊರು ಸುತ್ತುತ್ತಾ ಉಪಜೀವನ ನಡೆಸುತ್ತಿದ್ದ ಸೋಮಣ್ಣ ಕಣ್ಣೀರಿಡುವಂತಾಗಿದೆ.

 

 

ಕಾರ್ಯಕ್ರಮ ಮುಗಿದ ನಂತರ ಇಲ್ಲಿ ಸ್ವಚ್ಚತಾ ಕಾರ್ಯ ಕೈಗೊಳ್ಳಬೇಕಾಗಿತ್ತು ಆದರೆ ಜಿಲ್ಲಾಡಳಿತದ ಅಧಿಕಾರಿಗಳು ಇಲ್ಲಿ ಯಾವುದೇ ರೀತಿಯ ಸ್ವಚ್ಛತೆ ಮಾಡದೆ ಪ್ಲಾಸ್ಟಿಕ್ ವಸ್ತುಗಳು ಮತ್ತು ಅನ್ನವನ್ನು ಅಲ್ಲೇ ಬಿಟ್ಟಿದ್ದಾರೆ. ಹಾಗಾಗಿ ಏನೂ ತಿಳಿಯದ ಮೂಕ ಪ್ರಾಣಿಗಳು ಅದನ್ನು ತಿಂದು ಸಾವಿಗೀಡಾಗಿವೆ. ಈ ನೂರು ಕುರಿಗಳ ಸಾವಿಗೆ ಕೊಪ್ಪಳ ಜಿಲ್ಲಾಡಳಿತವೇ ನೇರ ಕಾರಣ ಆದ್ದರಿಂದ ಕೂಡಲೆ 100 ಕುರಿಗಳ ಸಾವಿಗೆ ಜಿಲ್ಲಾಡಳಿತವೇ ಪರಿಹಾರ ನೀಡಬೇಕು ಎಂದು ಸೋಮಣ್ಣ ಹೇಳುತ್ತಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top