fbpx
ಸಮಾಚಾರ

ಪ್ರಚೋದನಕಾರಿ ಭಾಷಣದ ಆರೋಪದಡಿಯಲ್ಲಿ ಹಿಂದೂ ಜಾಗರಣ ವೇದಿಕೆ ನಾಯಕ ಜಗದೀಶ್ ಕಾರಂತ ಅರೆಸ್ಟ್..

ಪ್ರಚೋದನಕಾರಿ ಭಾಷಣದ ಆರೋಪದಡಿಯಲ್ಲಿ ಹಿಂದೂ ಜಾಗರಣ ವೇದಿಕೆ ನಾಯಕ ಜಗದೀಶ್ ಕಾರಂತ ಅರೆಸ್ಟ್..

 

 

ಪುತ್ತೂರಿನಲ್ಲಿ ಸೆಪ್ಟೆಂಬರ್ 15ರಂದು ವಿವಿಧ ಹಿಂದೂ ಸಂಘಟನೆಗಳು ಕೈಗೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಕೋಮು ಗಲಭೆ ನಡೆಸುವುದಾಗಿ ಪ್ರಚೋದನಕಾರಿ ಭಾಷಣ ಮಾಡಿದ್ದ ಮತ್ತು ಅಬ್ದುಲ್ ಖಾದರ್ ಎಂಬ ಪೊಲೀಸ್ ಅಧಿಕಾರಿಯನ್ನು ತಲೆ ಬೋಳಿಸಿ, ಬೆತ್ತಲೆ ಮಾಡಿ ಕತ್ತೆ ಮೇಲೆ ಮೆರವಣಿಗೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಹಿಂದೂ ಜಾಗರಣ ವೇದಿಕೆ ಸಂಚಾಲಕ ಜಗದೀಶ್ ಕಾರಂತ್ ವಿರುದ್ಧ ಪೊಲೀಸರು ಅರೆಸ್ಟ್ ಮಾಡಿ FIR ದಾಖಲಿಸಿದ್ದಾರೆ..

 

 

ಪ್ರತಿಭಟನೆಯಲ್ಲಿ ಜಗದೀಶ್ ಕಾರಂತ್ ಸಂಪ್ಯ ಪೋಲೀಸ್ ಅಧಿಕಾರಿ ಅಬ್ದುಲ್ ಖಾದರ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು. ಈ ಸಂಬಂಧ ಪುತ್ತೂರು ನಗರ ಪೋಲೀಸರು ಪ್ರತಿಭಟನೆ ನಡೆದ ಒಂದು ವಾರದ ನಂತರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

 

 

ಬಿಹಾರದಲ್ಲಿ ಹಿಂದೂ ಜಾಗರಣ ವೇದಿಕೆಯ ಬೈಠಕ್ ಕಾರ್ಯಕ್ರಮವನ್ನು ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ಕಾರಂತರನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರಲ್ಲಿ ಜನಾಂಗ, ಧರ್ಮ, ಜಾತಿ ಆಧಾರದಲ್ಲಿ ಜನರ ನಡುವೆ ದ್ವೇಷ ಬಿತ್ತಲು ಪ್ರಚೋದನೆ ಭಾಷಣದ ಎಂಬ ಆರೋಪ ಕೂಡ ಅವರ ಮೇಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top