fbpx
ಸಮಾಚಾರ

ಮೋದಿ ಸರ್ಕಾರದ ವಿರುದ್ಧ ಅಣ್ಣಾ ಹಜಾರೆ ಗರಂ-ಡಿಸೆಂಬರ್​​ ನಲ್ಲಿ ಲೋಕಪಾಲ ಜಾರಿಗೆ ಹೋರಾಟ.

ಮೋದಿ ಸರ್ಕಾರದ ವಿರುದ್ಧ ಅಣ್ಣಾ ಹಜಾರೆ ಗರಂ-ಡಿಸೆಂಬರ್​​ ನಲ್ಲಿ ಲೋಕಪಾಲ ಜಾರಿಗೆ ಹೋರಾಟ..

 

 

ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಸೇರಿದಂತೆ ಇನ್ನೂ ಹಲವು ವಿಷಯಗಳನ್ನು ಕುರಿತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರವನ್ನು ಬರೆದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

 

 

ಅಧಿಕಾರಕ್ಕೆ ಬಂದು ಮೂರು ವರ್ಷವಾದ್ರೂ ಲೋಕಪಾಲ್ ನೇಮಕ ವಿಚಾರದಲ್ಲಿ ನಿರಾಸಕ್ತಿ ತೋರಿರುವ ಮೋದಿ ಸರ್ಕಾರದ ವಿರುದ್ಧ ನನ್ನ ಹೋರಾಟವಿರುತ್ತದೆ ಎಂದು ಪತ್ರದಲ್ಲಿ ಹೇಳಿದ್ದಾರೆ. ಕಳೆದ ಮೂರು ವರ್ಷಗಳಿಂದ ಈ ಕುರಿತು ನಾನು ಅನೇಕ ಬಾರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಆದರೆ, ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಒಂದೇ ಒಂದು ಪ್ರತಿಕ್ರಿಯೆಯನ್ನು ಸಹ ನೀಡಿಲ್ಲಾ,, ಈ ಪಾತ್ರಕ್ಕೂ ಉತ್ತರ ನೀಡದಿದ್ದರೆ ಮುಂದಿನ ಪತ್ರದಲ್ಲಿ ದೆಹಲಿಯಲ್ಲಿನ ಹೋರಾಟಕ್ಕೆ ದಿನಾಂಕ ಹಾಗೂ ಸ್ಥಳದ ಬಗ್ಗೆ ಬಹಿರಂಗಪಡಿಸುತ್ತೇನೆ ಎಂದು ಅವರು ಕಿಡಿ ಕಾರಿದ್ದಾರೆ.

 

 

ಬಿಜೆಪಿ ಸರಕಾರ ಚುನಾವಣೆಗೆ ಮೊದಲು ದೇಶದ ಜನರಿಗೆ ಸರಕಾರ ರಚನೆಯಾದ 100 ದಿನಗಳ ಒಳಗೆ ಕಪ್ಪುಹಣವನ್ನು ಮರಳಿಸುವುದಾಗಿ ಆಶ್ವಾಸನೆ ನೀಡಿತ್ತು. ಆದರೆ ಸರಕಾರ ರಚನೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಆಶ್ವಾಸನೆಗಳನ್ನು ಮರೆತ್ತಿದ್ದಾರೆ. ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

 

 

2011ರ ಏಪ್ರಿಲ್‍ನಲ್ಲಿ ಅಣ್ಣಾ ಹಜಾರೆ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಜನ್ ಲೋಕ್‍ಪಾಲ್ ಮಸೂದೆಗೆ ಆಗ್ರಹಿಸಿ ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. 2013ರಲ್ಲಿ ಲೋಕ್‍ಪಾಲ್ ಕಾಯ್ದೆಯನ್ನ ಪಾಸ್ ಮಾಡಲಾಗಿತ್ತು. ಆದರೆ ಇನ್ನು ಜಾರಿಗೆ ಬಂದಿಲ್ಲ ಹಾಗಾಗಿ ಡಿಸೆಂಬರ್ ಕಡೆಯ ವಾರ ಅಥವಾ ಜನವರಿ ಮೊದಲ ವಾರದಲ್ಲಿ ಹೋರಾಟ ಆರಂಭಿಸಲಾಗುವುದು ಎಂದು ಅಣ್ಣಾ ಹಜಾರೆ ತಿಳಿಸಿದ್ದಾರೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top