fbpx
ಉದ್ಯೋಗ

ಕರ್ನಾಟಕದಲ್ಲಿ ಕನ್ನಡ ವಿದ್ಯಾರ್ಥಿಗಳೇ ಭಿಕ್ಷುಕರಾಗಿದ್ದಾರೆ…

ಕರ್ನಾಟಕದಲ್ಲಿ ಕನ್ನಡ ವಿದ್ಯಾರ್ಥಿಗಳೇ ಭಿಕ್ಷುಕರಾಗಿದ್ದಾರೆ…

 

 

ಮುಂಬೈ ಮೂಲದ ಐಬಿಪಿಎಸ್‌ ಸಂಸ್ಥೆಯಿಂದ ನಡೆಸಲಾಗುತ್ತಿರುವ ಬ್ಯಾಂಕಿಂಗ್‌ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದ್ದು, ಅನ್ಯಭಾಷಿಕರು ರಾಜ್ಯದ ನಾನಾ ಬ್ಯಾಂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇವೆಗೆ ಹಾಜರಾಗುತ್ತಿದ್ದಾರೆ. ಅದರಿಂದ ಕನ್ನಡಿಗರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿ, ಕನ್ನಡಿಗರಿಗೆ ಹೆಚ್ಚಿನ ಅವಕಾಶ ನೀಡುವಂತೆ ಒತ್ತಾಯಿಸಿ ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ.

 

 

ಗ್ರಾಮೀಣ ಭಾಗದ ಜನತೆಗೆ ಬ್ಯಾಂಕಿಂಗ್ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಸ್ಥಾಪಿಸಲಾದ ಗ್ರಾಮೀಣ ಬ್ಯಾಂಕುಗಳಲ್ಲಿ ವರ್ಷದಿಂದ ಅನ್ಯ ರಾಜ್ಯದವರು ಹೆಚ್ಚು ಸಂಖ್ಯ್ರ್ಯಲ್ಲಿ ನೇಮಕಗೊಂಡಿದ್ದಾರೆ.. ಐಬಿಪಿಎಸ್‌ ಸಂಸ್ಥೆ ನಡೆಸುವ ಪರೀಕ್ಷೆಯಿಂದಾಗಿ ಹೊರ ರಾಜ್ಯದವರೇ ನೇಮಕಗೊಳ್ಳುತ್ತಿದ್ದು ಅದರಿಂದ ವಹಿವಾಟಿಗೆ ತೊಂದರೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ…

 

 

ಹೊರ ರಾಜ್ಯದವರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಐಬಿಪಿಎಸ್ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ರಾಜ್ಯದ ಅಭ್ಯರ್ಥಿಗಳನ್ನು ಮೌಖಿಕ ಪರೀಕ್ಷೆಯಲ್ಲಿ ಉದ್ದೇಶಪೂರ್ವಕವಾಗಿ ಅನುತ್ತೀರ್ಣಗೊಳಿಸಲಾಗುತ್ತಿದೆ.,ಎಂದು ಆರೋಪಿಸಿರುವ ಪ್ರತಿಭಟನಾಕಾರರು ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗದಂತೆ, ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ದೊರೆಯುವಂತೆ ಆಗ್ರಹಿಸಿದ್ದಾರೆ.

 

 

ಇನ್ನು ಈ ಉಪವಾಸ ಸತ್ಯಾಗ್ರಹ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದರೂ ಸಂಬಂಧಪಟ್ಟವರು ಪ್ರತಿಕ್ರಿಯೆ ನೀಡಿಲ್ಲ ಕನ್ನಡಿಗರಿಗೆ ನ್ಯಾಯ ಸಿಗುವ ತನಕ ಈ ಉಪವಾಸ ಸತ್ಯಾಗ್ರವನ್ನು ನಿಲ್ಲಿಸುವುದಿಲ್ಲ ಎಂದು ಉದ್ಯೋಗಾಕಾಂಕ್ಷಿ ಪ್ರತಿಭಟನಾಕಾರರು ತಿಳಿಸಿದ್ದಾರೆ..ಸತತ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ
ಕನ್ನಡದ ಉದ್ಯೋಕಾಂಕ್ಷಿಗಳ ಮೇಲೆ ಪೊಲೀಸರು ದೌರ್ಜನ್ಯ ಮೇಲೆಯುತ್ತಿದ್ದಾರೆ. ಪ್ರತಿಭಟನೆಯನ್ನು ಇಂದು ನಿಲ್ಲಿಸದಿದ್ದರೆ ಅರೆಸ್ಟ್ ಮಾಡಬೇಕಾಗುತ್ತದೆ ಎಂದು ಬೆದರಿಕೆಯನ್ನು ಒಡ್ಡಿದ್ದಾರೆ ಎಂದು ಪ್ರತಿಭಟನೆ ಮಾಡ್ತಿರುವ ಉದ್ಯೋಕಾಂಕ್ಷಿಗಳು ಹೇಳಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top