fbpx
ಮನೋರಂಜನೆ

ತಲ್ಲೂರು ಕೆರೆಯಲ್ಲಿ ಮತ್ತೆ ಜಿನುಗಿದ ನೀರು ಬಾಗಿನ ಅರ್ಪಿಸಿದ ಯಶ್‌ ಮತ್ತು ರಾಧಿಕಾ ಪಂಡಿತ್

ನಟ ಯಶ್ ತಮ್ಮ ಯಶೋಮಾರ್ಗದಿಂದ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆಯಲ್ಲಿನ ಹೂಳು ತೆಗೆಯುವ ಕೆಲಸ ಮಾಡಿಸಿದ್ದರು. ಇತ್ತೀಚೆಗೆ ಸುರಿದ ಮಳೆಯಿಂದಾಗಿ ತಲ್ಲೂರು ಕೆರೆ ತುಂಬಿದೆ. ಯಶ್ ಹಾಗೂ ರಾಧಿಕಾ ಪಂಡಿತ್ ತಲ್ಲೂರು ಕೆರೆಗೆ ಬಾಗಿನ ಅರ್ಪಿಸಿದರು .

 

 

ಕೆರೆ ಹೂಳು ತೆಗೆದು ಅಭಿವೃದ್ಧಿಪಡಿಸುವ ಜಲ ಸಂರಕ್ಷಣೆ ಕೆಲಸಕ್ಕೆ ಸರಿಯಾಗಿ ಒಂದು ತಿಂಗಳ ಹಿಂದೆ ಸ್ವತಃ ಯಶ್‌ ಮತ್ತು ಪತ್ನಿ ರಾಧಿಕಾ ಪಂಡಿತ್‌ ಚಾಲನೆ ನೀಡಿದ್ದರು

 

 

250 ಟ್ರ್ಯಾಕ್ಟರ್‌ಗಳಂತೆ ತಿಂಗಳ ಅವಧಿಯಲ್ಲಿ 7 ಸಾವಿರ ಟ್ರ್ಯಾಕ್ಟರ್‌ ಹೂಳನ್ನು ತೆಗೆದು ರೈತರ ಹೊಲಗದ್ದೆಗಳಿಗೆ ಸಾಗಿಸಲಾಗಿದೆ. ಕೆರೆಯು 96 ಎಕರೆ ವಿಸ್ತೀರ್ಣ ಹೊಂದಿದ್ದು, ಅದರಲ್ಲಿ ಸುಮಾರು 50 ಎಕರೆ ವ್ಯಾಪ್ತಿಯಲ್ಲಿ ನೀರು ನಿಲ್ಲುತ್ತದೆ. 1972– 73ರಲ್ಲಿ ನಿರ್ಮಾಣಗೊಂಡಿರುವ ಈ ಕೆರೆಯ ಹೂಳು ತೆಗೆಯುತ್ತಿರುವುದು ಇದೇ ಮೊದಲು.

 

 

ಕೆರೆ ಈಗ ತುಂಬಿರೋದ್ರಿಂದ ಸುಮಾರು 10ಕ್ಕೂ ಹೆಚ್ಚು ಗ್ರಾಮಗಳಲ್ಲಿನ ರೈತರಿಗೆ ಅನುಕೂಲವಾಗಲಿದೆ, 4 ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮಾಡಲಾಗಿದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top