fbpx
ಮನೋರಂಜನೆ

ಚುನಾವಣೆಯಲ್ಲಿ ಗೀತಾ ಶಿವರಾಜ್‍ಕುಮಾರ್ ಸ್ಪರ್ಧಿಸುವುದರ ಬಗ್ಗೆ ಸ್ಪಷ್ಟನೆ ನೀಡಿದ ಸಹೋದರ ಮಧು ಬಂಗಾರಪ್ಪ.

ಚುನಾವಣೆಯಲ್ಲಿ ಗೀತಾ ಶಿವರಾಜ್‍ಕುಮಾರ್ ಸ್ಪರ್ಧಿಸುವುದರ ಬಗ್ಗೆ ಸ್ಪಷ್ಟನೆ ನೀಡಿದ ಸಹೋದರ ಮಧು ಬಂಗಾರಪ್ಪ.

 

 

2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಗೀತಾ ಶಿವರಾಜಕುಮಾರ್ ಮುಂಬರುವ 2018 ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್ಕುಮಾರ್ ಅವರು ಸ್ಪರ್ಧೆ ಮಾಡುವುದರ ಬಗ್ಗೆ ಅವರ ಸಹೋದರ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.

 

 

ಗೀತಾ ಅವರು ಈ ಭಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಲಿದ್ದಾರೆ, ಸ್ಪರ್ಧಿಸೋದಿಲ್ಲ ಎಂಬ ನಾನಾ ಸುದ್ದಿ ಕೆಲ ದಿನಗಳಿಂದ ಕೇಳಿ ಬರುತಿತ್ತು ಆದರೆ ಆ ಸುದ್ದಿಗೆ ಸ್ವತಃ ಅವರ ಸಹೋದರ ಮಧು ಬಂಗಾರಪ್ಪ ಅವರೇ ಪ್ರತಿಕ್ರಿಯಿಸಿದ್ದಾರೆ, ಗೀತಾ ಶಿವರಾಜಕುಮಾರ್ ಅವ್ರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ “ಆ ವಿಷಯದ ಬಗ್ಗೆ ಸದ್ಯಕ್ಕೆ ನನಗೆ ಯಾವುದೇ ಮಾಹಿತಿಗಳಿಲ್ಲ. ಗೀತಾ ಶಿವರಾಜ್‍ಕುಮಾರ್ ಅವರ ಮೇಲೆ ಯಾವುದೇ ರಾಜಕೀಯ ಒತ್ತಡಗಳನ್ನು ಹಾಕಲು ನಾನು ಇಚ್ಛಿಸುವುದಿಲ್ಲ” ಎಂದು ಉತ್ತರಿಸಿದರು.

 

 

ಕಳೆದ ವಾರ ಮಾಫ್ತಿ ಚಿತ್ರದ ಪ್ರೊಮೋಷನ್ ಗೆ ದೊಡ್ಡಬಳಾಪುರಕ್ಕೆ ಹೋಗಿದ್ದ ವೇಳೆಯಲ್ಲಿ ” ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೀತಾ ಸ್ಪರ್ಧಿಸುವುದಿಲ್ಲ. ನಮಗೆ ಎಲ್ಲಾ ಪಕ್ಷಗಳಲ್ಲಿಯೂ ಅಭಿಮಾನಿಗಳಿದ್ದಾರೆ.. ನನ್ನ ಸ್ನೇಹಿತ ಉಪೇಂದ್ರರವರ ಕೆಪಿಜೆಪಿ ಪಕ್ಷಕ್ಕೆ ನಮ್ಮ ಬೆಂಬಲ ಇರುತ್ತದೆ. ಕೆಪಿಜೆಪಿ ಪಕ್ಷದ ಪರವಾಗಿ ಪ್ರಚಾರ ನಡೆಸುವುದಾಗಿ” ನಟ ಶಿವರಾಜಕುಮಾರ್ ಹೇಳಿಕೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top