fbpx
ಕನ್ನಡ

ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಒತ್ತಾಯಿಸಿ ಪ್ರತಿಭಟನೆ.

ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಒತ್ತಾಯಿಸಿ ಪ್ರತಿಭಟನೆ.

 

 

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಇಂದು ಬೆಂಗಳೂರಿನ ನಗರದ ನ್ಯಾಷನಲ್ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದೆ.

 

 

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು “ಮುಂದಿನ ವಿಧಾನಸಭಾ ಚುನಾವಣೆ ನಡೆಯುದಕ್ಕೂ ಮುಂಚೆಯೇ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉಗ್ರ ಪ್ರತಿಭಟನೆ ಮಾಡಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕನ್ನಡ ನಾಡಿನ ನೆಲ,ಜಲ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ಶುರುಮಾಡಿರುವ ಉದ್ದಿಮೆಗಳಲ್ಲಿ ಕನ್ನಡಿಗರಿಗಿಂತ ಹೊರರಾಜ್ಯದವರಿಗೆ ಪ್ರಾಧ್ಯಾನ್ಯತೆ ನೀಡಲಾಗಿದೆ ಎಂದು ಕಿಡಿಕಾರಿದ್ದಾರೆ.15 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಕೊಂಡಿದ್ದು ಕನ್ನಡ ಭಾವುಟಗಳನ್ನು ಕೈನಲ್ಲಿ ಹಿಡಿದು ಬೈಕ್ ರ್ಯಾಲಿ ನಡೆಸಿದರು.

 

 

 

ಉದ್ಯೋಗ ಕ್ಷೇತ್ರದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಬೇಕು ಎಂದು ಡಾ.ಸರೋಜಿನಿ ಮಹಿಷಿ ಅವರು ಕೆಲವು ವರ್ಷಗಳ ಹಿಂದೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದ್ದರು ಆದ್ರೆ ವರದಿ ಸಲ್ಲಿಕೆಯಾಗಿ ಹಲವು ವರ್ಷಗಳೆ ಕಳೆದರೂ ಇನ್ನೂ ಸರ್ಕಾರ ಅನುಷ್ಠಾನಕ್ಕೆ ತರುವ ಮನಸ್ಸು ಮಾಡಿಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top