fbpx
ಸಮಾಚಾರ

ದಾನಮ್ಮ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ವಿಜಯಪುರದಲ್ಲಿ ಬಂದ್, ವ್ಯಾಪಕ ಬೆಂಬಲ..

ದಾನಮ್ಮ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ವಿಜಯಪುರದಲ್ಲಿ ಬಂದ್, ವ್ಯಾಪಕ ಬೆಂಬಲ..

 

 

ಅಪ್ರಾಪ್ತ ದಲಿತ ಶಾಲಾ ಬಾಲಕಿ ದಾನಮ್ಮಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ ಮಾಡಿದ ಅಮಾನವೀಯ ಕೃತ್ಯವನ್ನು ಖಂಡಿಸಿ ದಲಿತ ಸಂಘಟನೆಯ ಕಾರ್ಯಕರ್ತರು ಸೇರಿ ಹಲವಾರು ಸಂಘಟನೆಗಳು ಇಂದು (ಶನಿವಾರ) ವಿಜಯಪುರ ಬಂದ್‌ಗೆ ಕರೆ ನೀಡಿದ್ದು, ಬಂದ್‌ಗೆ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ಬಾಲಕಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
 

 

ಬಾಗಲಕೋಟೆ, ಕಲಬುರ್ಗಿ, ರಾಯಚೂರು, ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲಿಗಳಿಂದ ಜನಸಾಗರವೇ ಹರಿದುಬಂದಿದ್ದು ಬಂದ್ ಅನ್ನು ಬೆಂಬಲಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಬೀದಿ ವ್ಯಾಪಾರ, ಬಸ್ ಸಂಚಾರ, ಆಟೋರಿಕ್ಷಾ ಸೇವೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಚಿತ್ರಮಂದಿರಗಳನ್ನು ಬಂದ್​ ಮಾಡಲಾಗಿದೆ. ನೀಚ ಕೃತ್ಯದ ವಿರುದ್ಧ ಘೋಷಣೆಗಳನ್ನು ಕೂಗುತ್ತ ನಗರದ ಅಂಬೇಡ್ಕರ್ ವೃತ್ತದ ಬಳಿ ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ದಲಿತ ಮುಖಂಡರಾದ ಭಾಸ್ಕರ ಪ್ರಸಾದ್, ಚಂದ್ರಶೇಖರ್ ಕೊಡಭಾಗಿ, ಯಮುನಪ್ಪ ನೇತೃತ್ವದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿರುವ ಪೊಲೀಸರ ವಿರುದ್ಧ ಪ್ರಕರಣದ ಬಗ್ಗೆ ಬಾಯಿ ಬಿಚ್ಚದಿರುವ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರ ಆಕ್ರೋಶ ವ್ಯಕ್ತಪಡಿಸಿದರು.

 

 

ಸರ್ಕಾರಿ ನೌಕರರೂ, ಕೂಲಿ ಕಾರ್ಮಿಕರೂ, ಆಟೋ ಮತ್ತು ಸರ್ಕಾರಿ ಹಾಗೂ ಖಾಸಗಿ ಬಸ್ ಚಾಲಕರು, ವರ್ತಕ ಸಂಘಗಳು, ಬೀದಿ ವ್ಯಾಪಾರಿಗಳು, ವಿವಿದ ಸಂಘಟನೆಗಳೂ ಬಂದ್ ಪ್ರತಿಭಟನೆಯಲ್ಲಿ ಪಾಲ್ಕೊಂಡಿ ದಾನಮ್ಮಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ನೀಚರಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪ್ರತಿಭಟನಾಕಾರರು ಎಲ್ಲೆಂದರಲ್ಲಿ ಟೈಯರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದರು, ಪ್ರತಿಭಟನೆ ತೀವ್ರ ಸ್ವರೂಪ ಪಡೆದು ಹಿಂಸಾಚಾರ ರೂಪಕ್ಕೆ ತಿರುಗುತ್ತಿದ್ದಂತೆ ಪ್ರತಿಭಟನಾಕಾರರ ಬಳಿ ಇದ್ದ ಟಯರ್’ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

 

 

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಪ್ರಾಪ್ತ ಬಾಲಕ ಸೇರಿದಂತೆ, ಸಾಗರ ಮೋರೆ, ಶ್ರೀಶೈಲ ಮುಚ್ಚಂಡಿ, ಕೈಲಾಸ ರಾಥೋಡ ರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಾಲ್ಕೂ ಜನರೂ ವಿಜಯಪುರ ನಗರದ ದರ್ಗಾ ಬಡಾವಣೆಯ ವಾಸಿಗಳು ಎಂದು ತಿಳಿದುಬಂದಿದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top