fbpx
ಮನೋರಂಜನೆ

2017ರ ಅತ್ಯುತ್ತಮ ಮಕ್ಕಳ ಚಿತ್ರ : ಎಳೆಯರು ನಾವು ಗೆಳೆಯರು

2017ರ ಅತ್ಯುತ್ತಮ ಮಕ್ಕಳ ಚಿತ್ರ : ಎಳೆಯರು ನಾವು ಗೆಳೆಯರು

 

 

ಇದನ್ನು ಪ್ರಶಸ್ತಿ ಅನ್ನಬೇಕಾ? ಗೌರವದ ಕಾಣಿಕೆ ಅನ್ನಬೇಕಾ ಎಂಬುದು ಓದುಗರಿಗೆ ಬಿಟ್ಟದ್ದು. ಆದರೆ ಒಂದು ವರ್ಷದ ಅಷ್ಟೂ ಚಿತ್ರಗಳ ವಿವಿಧವಿಭಾಗಗಳಲ್ಲಿ ಕೆಲಸ ಮಾಡಿದ, ಪ್ರತಿಭೆಯಿಂದ ಪ್ರೇಕ್ಷಕರ ಮನ ಗೆದ್ದ, ಕ್ರಿಯೇಟಿವಿಟಿಯಿಂದ ಗಮನ ಸೆಳೆದವರನ್ನು ವರ್ಷದ ಕೊನೆಯಲ್ಲಿನೆನೆಸಿಕೊಂಡು ಗೌರವಿಸೋ ಮಹದಾಸೆಯಿಂದ ಸಿನಿಬಜ಼್ ಸ್ಟಾರ್ ಆಫ್ ದಿ ಇಯರ್ -2017 ರೂಪಿಸಲ್ಪಟ್ಟಿದೆ. ಒಂದು ಸಿನಿಮಾರೂಪುಗೊಳ್ಳಬೇಕೆಂದರೆ ಅದರ ವಿವಿಧ ವಿಭಾಗಗಳಲ್ಲಿ ಹಲವು ಮಂದಿ ಕೆಲಸ ಮಾಡಿರುತ್ತಾರೆ. ಅದನ್ನೇ ಉಸಿರಾಡಿರುತ್ತಾರೆ. ಅಂಥಾ ಎಲ್ಲಾವಿಭಾಗಗಳನ್ನೂ ಜಾಲಾಡಿ ಒಬ್ಬೊಬ್ಬರನ್ನು ಗೌರವಿಸೋ ಪ್ರಯತ್ನವನ್ನು ನಾವು ಮಾಡಿದ್ದೇವೆ. ಇದರಾಚೆಗೆ ಈ ಪುರಸ್ಕಾರಕ್ಕೆ ಪಾತ್ರರಾಗೋಅರ್ಹತೆ ಇರುವವರು ಖಂಡಿತಾ ಇದ್ದಾರೆ. ಆದರೆ ಒಂದು ಮಿತಿಯೊಳಗೆ ಗೌರವವನ್ನಿಲ್ಲಿ ಕೊಡಮಾಡಿದ್ದೇವೆ…
ನಮ್ಮ ಆಯ್ಕೆಯ ಒಬ್ಬೊರ ಹೆಸರೂ ಒಂದೊಂದು ಪೋಸ್ಟ್ ಮೂಲಕ ಇಲ್ಲಿ ಅನಾವರಣಗೊಳ್ಳಲಿದೆ…

 

 

ಮಕ್ಕಳ ಚಿತ್ರವಾದರೂ ಗಂಭೀರವಾದ ಕಥಾ ವಸ್ತು ಮತ್ತು ಗುಣಮಟ್ಟದಿಂದ ಮುಖ್ಯವಾಗೋ ಚಿತ್ರ ಎಳೆಯರು ನಾವು ಗೆಳೆಯರು. ನಾಗರಾಜ್ ಗೋಪಾಲ್ ನಿರ್ಮಾಣದ ಈ ಚಿತ್ರ ಸೋಲು ಗೆಲುವಿನಾಚೆಗೆ ಒಂದು ಮೈಲಿಗಲ್ಲಾಗಿ ಖಂಡಿತಾ ದಾಖಲಾಗಿದೆ. ಮಕ್ಕಳ ಚಿತ್ರಗಳ ಸಿದ್ಧ ಚೌಕಟ್ಟು ಮೀರಿ ಹೊಸಾ ಹೊಳಹು ನೀಡಿದ್ದ ಈ ಚಿತ್ರ ಹೊಸಾ ಪ್ರಯೋಗಕ್ಕೆ ನಾಂದಿ ಹಾಡಿದೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top