fbpx
ಆರೋಗ್ಯ

ತಾಮ್ರದ ಚೊಂಬಿನಿಂದ ನೀರುಕುಡಿಯುವುದರಿಂದ ಆಗುವ ಆರೋಗ್ಯಕಾರಿ ಪ್ರಯೋಜನ ಬಗ್ಗೆ ತಿಳ್ಕೊಳ್ಳಿ.

ತಾಮ್ರದ ಚೊಂಬಿನಿಂದ ನೀರುಕುಡಿಯುವುದರಿಂದ ಆಗುವ ಆರೋಗ್ಯಕಾರಿ ಪ್ರಯೋಜನ ಬಗ್ಗೆ ತಿಳ್ಕೊಳ್ಳಿ.

 

 

 

ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟಿರಿಯಾಗಳನ್ನ ನಾಶ ಮಾಡುತ್ತದೆ. ಅಂತೆಯೇ ಹೊಟ್ಟೆಯಾಳಗಿನ ಉರಿಯನ್ನು ಕಡಿಮೆ ಮಾಡುತ್ತದೆ .
ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ಮಾಡುತ್ತದೆ.

 

 

ತಾಮ್ರದ ಅಂಶ ಮಾನವನ ದೇಹದಲ್ಲಿ ರೋಗ ನಿರೋಧಕ ಅಂಶವನ್ನು ಹೆಚ್ಚಿಸುತ್ತದೆ. ಆ ಮೂಲಕ ಯಾವುದೇ ರೋಗಗಳು ಸುಲಭವಾಗಿ ದೇಹಕ್ಕೆ ಬರದಂತೆ ನೋಡಿಕೊಳ್ಳುತ್ತದೆ. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.

 

 

ತಾಮ್ರದ ಆಂಟಿ ಆಕ್ಸಿಡೆಂಟ್ ಅಂಶ ಯಥೇಚ್ಛವಾಗಿದ್ದು , ಇದು ದೇಹದ ಅನವಶ್ಯಕ ಬೊಜ್ಜಿನ ನಿರ್ವಹಣೆಯನ್ನು ತಡೆಯುತ್ತದೆ. ಅಂತೆಯೇ ದೇಹ ಮತ್ತು ಮುಖದ ಮೇಲಿನ ಸೊಕ್ಕುಗಳನ್ನು ತೊಡೆದು ಹಾಕುವ ಶಕ್ತಿ ತಾಮ್ರಕ್ಕೆ ಇದ್ದು. ನಿರ್ಜಿವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗಗೆ ಸಹಕಾರಿಯಾಗುತ್ತದೆ.
ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೊರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಹೃದಯದ ರಕ್ತನಾಳ ಶುದ್ದೀಕರಣ ಮೂಲತ ಹೃದಯ ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ ತಾಮ್ರ BP ಯನ್ನು ಕೂಡ ನಿಯಂತ್ರಿಸುತ್ತದೆ.

 

 

ತಾಮ್ರ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಅಂತೆಯೇ ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆ ಇದು ತಡೆಯುತ್ತದೆ. ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸಿಗುತ್ತದೆ.
ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ಸಹಕಾರಿಯಾಗಿದೆ ಎಂದು ವ್ಯೆದ್ಯರು ಅಭಿಪ್ರಾಯಪಟ್ಟಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top