fbpx
ಸಮಾಚಾರ

”RSS ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೇ ಪ್ರಣಬ್ ಮುಖರ್ಜಿಗೆ ಭಾರತ ರತ್ನ” ಜೆಡಿಎಸ್ ಮುಖಂಡ ಹೇಳಿಕೆ.

ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ, ಭಾರತೀಯ ಜನಸಂಘದ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ನಾನಾಜಿ ದೇಶ್‌ಮುಖ್‌ ಮತ್ತು ಅಸ್ಸಾಮ್‌ನ ಅಮರ ಗಾಯಕ, ಸಾಹಿತಿ ಭೂಪೇನ್‌ ಹಜಾರಿಕಾ ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿರುವ ಭಾರತ ರತ್ನ ನೀಡಲಾಗಿದೆ. 70ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ಸೇರಿದಂತೆ ಮೂವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಲಾಗಿದೆ.

RSS ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೇ ಭಾರತ ರತ್ನ:
ಬಿಜೆಪಿ ಮಾತೃಸಂಸ್ಥೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕಾಗಿಯೇ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಭಾರತ ರತ್ನ ಘೋಷಣೆ ಮಾಡಲಾಗಿದೆ ಎಂದು ಜೆಡಿಎಸ್ ಮುಖಂಡರು ಹೇಳಿದ್ದಾರೆ. ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಡ್ಯಾನಿಶ್ ಅಲಿ ಅವರು ಶುಕ್ರವಾರ ಇಂತಹುದೊಂದು ಹೇಳಿಕೆ ನೀಡಿದ್ದು, ನಾಗಪುರದಲ್ಲಿ ನಡೆದಿದ್ದ ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಭಾಗಿಯಾಗಿದ್ದು ಮಾತ್ರವಲ್ಲದೇ ಆರ್ ಎಸ್ಎಸ್ ಸಂಸ್ಥಾಪಕ ಕೆ ಬಿ ಹೆಡ್ಗೆವಾರ್ ರನ್ನು ಮಣ್ಣಿನ ಮಗ ಎಂದು ಹೊಗಳಿದ್ದರು. ಪ್ರಣಬ್ ಅವರ ಹೊಗಳಿಕೆಯಿಂದಾಗಿ ಕೇಂದ್ರ ಸರ್ಕಾರ ಸಂತುಷ್ಟಗೊಂಡು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ವ್ಯಂಗ್ಯ ಮಾಡಿದ್ದಾರೆ.

ಜನವರಿ 21ರಂದು ಲಿಂಗೈಕ್ಯರಾದ ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಈ ಬಾರಿಯಾದರೂ ‘ಭಾರತ ರತ್ನ’ ಸಿಗಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಅವರಿಗೆ ದೇಶದ ಅತ್ಯುನ್ನತ ಗೌರವ ನೀಡಬೇಕೆಂಬ ಬೇಡಿಕೆ ಕಳೆದ ಕೆಲವು ವರ್ಷಗಳಿಂದ ತೀವ್ರವಾಗಿದ್ದರೂ ಸರಕಾರ ಪರಿಗಣಿಸಿಲ್ಲ.

ಶ್ರೀಗಳಿಗೆ ಭಾರತರತ್ನ ನೀಡುವಂತೆ ಪಕ್ಷಭೇದ ಮರೆತು ಎಲ್ಲಾ ಪಕ್ಷದ ನಾಯಕರೂ ಆಗ್ರಹಿಸಿದ್ದರು. ಲಕ್ಷಾಂತರ ಮಕ್ಕಳಿಗೆ ಶಿಕ್ಷಣ ಕೊಟ್ಟು ಭವಿಷ್ಯ ರೂಪಿಸಿದ ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ನೀಡಿದರೆ ಪ್ರಶಸ್ತಿಯ ಗೌರವವೇ ಹೆಚ್ಚಾಗುತ್ತದೆ ಎಂದು ಒತ್ತಾಯಿಸಿದ್ದರು. ಇದೀಗ ಶ್ರೀಗಳನ್ನು ಗುರುತಿಸದ ಬಗ್ಗೆ ಪಕ್ಷಭೇದ ಮರೆತು ರಾಜ್ಯದ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top