fbpx
ಮನೋರಂಜನೆ

ದರ್ಶನ್ ಅಭಿನಯದ ಯಜಮಾನ ಟ್ರೈಲರ್ ಆಗಮನಕ್ಕೆ ಮುಹೂರ್ತ ಫಿಕ್ಸ್.

ಪ್ರೇಕ್ಷಕ ವಲಯದಲ್ಲಿ ನಾನಾ ಕಾರಣಗಳಿಂದ ವಿಪರೀತ ನಿರೀಕ್ಷೆ ಹುಟ್ಟುಹಾಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಂದಿನ ಸಿನಿಮಾ ‘ಯಜಮಾನ’ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ. ಚಿತ್ರದ ಟೈಟಲ್’ನಿಂದ ಹಿಡಿದು ತಾರಾಗಣದವರೆಗೆ ಎಲ್ಲದರಲ್ಲೂ ಕುತೂಹಲ ಮೂಡಿಸಿರುವ ಯಜಮಾನ ಚಿತ್ರತಂಡ ಆದಷ್ಟು ಬೇಗ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

ಈಗಾಗಲೇ ರಿಲೀಸ್ ಆಗಿರುವ ಮೂರು ಹಾಡುಗಳು ಕೂಡ ದಾಖಲೆಯ ಮಟ್ಟದಲ್ಲಿ ಹಿಟ್ ಆಗಿದ್ದು ನಾಳಿದ್ದು(ಫೆಬ್ರವರಿ 05) ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಆಗುತ್ತಿದೆ. ದಿನೇ ದಿನೇ ಯಜಮಾನ ಸಿನಿಮಾ ನೋಡ್ಬೇಕು ಅನ್ನೋ ಕುತೂಹಲ ಹೆಚ್ಚಾಗ್ತಿದ್ದು, ಆ ಕುತೂಹಲವನ್ನ ಮತ್ತೊಂದು ಹಂತಕ್ಕೇರಿಸಲು ಟ್ರೈಲರ್ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಮೂಲಗಳ ಪ್ರಕಾರ ದರ್ಶನ್ ಬರ್ತ್​​ಡೇ ಅಂದ್ರೆ, ಫೆಬ್ರವರಿ 15ರ ರಾತ್ರಿ 12 ಗಂಟೆಗೆ ಯಜಮಾನ ಟ್ರೈಲರ್ ರಿಲೀಸ್ ಮಾಡೋಕೆ ಚಿತ್ರತಂಡ ಪ್ಲಾನ್ ಮಾಡ್ತಿದ್ದು ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಲು ಮುಂದಾಗಿದೆಯಂತೆ..

ಆದರೆ ದರ್ಶನ್ ಹುಟ್ಟುಹಬ್ಬಕ್ಕೆ ಟ್ರೈಲರ್ ಬಿಡುಗಡೆಯಾಗುತ್ತದೆಯೇ ಇಲ್ಲವೇ ಎಂಬುದು ಅಧಿಕೃತವಾಗಿ ಅನೌನ್ಸ್ ಆಗಿಲ್ಲ ಬಹುಶಃ ಒಂದೆರಡು ದಿನಗಳಲ್ಲಿ ಟ್ರೈಲರ್ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗುತ್ತದೆ.

ಯಜಮಾನ ಬಗ್ಗೆ.
ಬಿ ಸುರೇಶ್ ಮತ್ತು ಶೈಲಜಾ ನಾಗ್ ಅವರು ತಮ್ಮ ಮೀಡಿಯಾ ಹೌಸ್ ಕಡೆಯಿಂದ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪೊನ್ನು ಕುಮಾರ್ ಯಜಮಾನ ಚಿತ್ರದ ನಿರ್ದೇಶನದ ಹೊಣೆ ಹೊತ್ತಿದ್ದಾರೆ.. ವಿ ಹರಿಕೃಷ್ಣ ಅವರು ಸಂಗೀತ ನಿರ್ದೇಶನ ಮಾಡುತಿದ್ದರೆ ಭರ್ಜರಿ ಚೇತನ್ ಸಂಭಾಷಣೆ ಬರೆಯುತ್ತಿದ್ದಾರೆ. ದರ್ಶನ್’ಗೆ ನಾಯಕಿಯರಾಗಿ, ರಶ್ಮಿಕಾ ಮಂದಣ್ಣ ಮತ್ತು ತಾನ್ಯಾ ಹೋಪ್ ನಟಿಸಿದ್ದು ಧನಂಜಯ್ ಮತ್ತು ಸಿಂಗಂ ಖ್ಯಾತಿಯ ಥಾಕುರ್ ಅನೂಪ್ ಸಿಂಗ್ ಸೇರಿದಂತೆ ಅನೇಕ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top