fbpx
ಭವಿಷ್ಯ

ಮಂಡ್ಯದಲ್ಲಿ ಜೆಡಿಎಸ್​ಗೆ ಮತ್ತೊಂದು ಬಿಗ್ ಶಾಕ್.

ಹೈವೋಲ್ಟೇಜ್ ಕಣವಾಗಿ ಪರಿಣಮಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾಗೆ ದಿನಗಣನೆ ಶುರುವಾಗುತ್ತಿದ್ದಂತೆಯೇ ರಾಜಕೀಯ ರಂಗೇರಿದೆ. ಈ ಸಲ ಮಂಡ್ಯ ಲೋಕಸಭೆ ಕ್ಷೇತ್ರ ತೀರಾ ಕುತೂಹಲ ಮೂಡಿಸಿದ್ದು ಒಂದು ಕಡೆ ರೆಬೆಲ್ ಸ್ಟಾರ್ ಅಂಬರೀಷ್ ಪತ್ನಿ ಸುಮಲತಾ ಚುನಾವಣೆಗೆ ಅಭ್ಯರ್ಥಿಯ ಸ್ಥಾನದಲ್ಲಿ ಮಂಡ್ಯದಲ್ಲಿ ಭಾಗವಹಿಸಿದರೆ, ಇನ್ನೊಂದು ಕಡೆ ಮುಖ್ಯಮಂತ್ರಿಯ ಮಗ ನಿಖಿಲ್ ಕುಮಾರ್ ಸ್ವಾಮಿ ಕೂಡ ಅದೇ ಜಾಗಕ್ಕೆ ಸುಮಲತಾ ಅವರಿಗೆ ಪೈಪೋಟಿ ನೀಡಲಿದ್ದಾರೆ.. ಜಿದ್ಧಾ ಜಿದ್ದಿ ಕಣವಾಗಿರುವ ಸಕ್ಕರೆ ನಾಡಿನಲ್ಲಿ ಸುಮಲತಾ ಹಾಗೂ ಜೆಡಿಎಸ್​ ನಡುವೆ ರಾಜಕೀಯ ತಾರಕಕ್ಕೇರುತ್ತಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಮತ್ತು ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಿಖಿಲ್ ಕುಮಾರ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಆದರೆ ಇದೀಗ ಮಂಡ್ಯದಲ್ಲಿ ಜೆಡಿಎಸ್ ಗೆ ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ.

ರೈತಸಂಘ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡಲು ನಿರ್ಧರಿಸಿದೆ. ರೈತಸಂಘ ಸುಮಾರು 1.50 ಲಕ್ಷ ಮತ ಬ್ಯಾಂಕ್​ ಅನ್ನು ಹೊಂದಿದ್ದು, ಸುಮಲತಾ ಅವರಿಗೆ ಬೆಂಬಲ ನೀಡಲು ರೈತಸಂಘದ ಕಾರ್ಯಕರ್ತರು ಒಪ್ಪಿಗೆ ನೀಡಿದ್ದಾರೆ. ಸುಮಲತಾ ಅವರು ಇತ್ತೀಚೆಗೆ ರೈತನಾಯಕ ದಿ. ಕೆ.ಎಸ್​ ಪುಟ್ಟಣ್ಣಯ್ಯ ಅವರ ಮನೆಗೆ ಭೇಟಿ ನೀಡಿದ್ದರು. ಬಿಜೆಪಿ ಬೆಂಬಲದ ನಂತರ ಸುಮಲತಾ ಅವರಿಗೆ ರೈತಸಂಘದ ಬೆಂಬಲ ಸಿಕ್ಕಿರುವುದು ಆನೆ ಬಲ ಬಂತಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top