fbpx
ಸಮಾಚಾರ

“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ #IBPSಮೋಸ ಸಮಸ್ಯೆಗೆ ಪರಿಹಾರ” ಸಂಸದ ಜಿಸಿಸಿ ಭರವಸೆ.

ಇನ್ನೇನು ಕೆಲವೇ ದಿನಗಳಲ್ಲಿ ದೇಶಾದ್ಯಂತ ನಡೆಯಲಿರುವ ಲೋಕಸಭೆ ಚುನಾವಣೆಗೆ ಹಲವು ಆಶೋತ್ತರಗಳನ್ನು ಹೊತ್ತ ಪ್ರಣಾಳಿಕೆಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ನೀಟ್ ರದ್ದುಗೊಳಿಸುವುದಾಗಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಭರವಸೆ ನೀಡಿದೆ.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ಕೇಂದ್ರ ಸರ್ಕಾರ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್‌)ಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಇದರ ಜೊತೆಗೆ ಕರ್ನಾಟಕ ಸೇರಿದಂತೆ ಎಲ್ಲಾ ಪ್ರದೇಶಕ ಭಾಷಾ ಪ್ರಾಬಲ್ಯ ಹೊಂದಿರುವ ರಾಜ್ಯಗಳಿಗೆ ತಲೆನೋವಾಗಿ ಪರಿಣಮಿಸಿರುವ IBPS ಸಮಸ್ಯೆಯನ್ನು ಕೂಡ ಪರಿಹರಿಸುವುದಾಗಿ ಸಂಸದ ಜಿಸಿ ಚಂದ್ರಶೇಖರ್ ಭರವಸೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಜಿಸಿ ಚಂದ್ರಶೇಖರ್ “ನಾವು ಅಧಿಕಾರಕ್ಕೆ ಬಂದರೆ Neet ಜೊತೆ #IBPSmosa ಸಮಸ್ಯೆಯನ್ನು ಕೂಡ ಪರಿಹರಿಸುತ್ತೇವೆ. ಇದರಿಂದ ರಾಜ್ಯದ ಯುವಕರಿಗೆ ಮತ್ತು ಗ್ರಾಮೀಣ ಜನರಿಗೆ, ಅನುಕೂಲ ಆಗಲಿದೆ.” ಎಂದು ಬರೆದುಕೊಂಡಿದ್ದು ನೀಟ್ ರದ್ದುಗೊಳಿಸುವುದಾಗಿ ನೀಡಿರುವ ಅಶ್ವನಿಯ ಫೋಟೋವನ್ನು ಹಂಚಿಕೊಂಡಿದ್ದಾರೆ

ಏನಿದು ಐಬಿಪಿಎಸ್ ವಿವಾದ?
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನಡೆಸಿದ ಪರೀಕ್ಷೆಯಲ್ಲಿ ಹೊರ ರಾಜ್ಯದ ಶೇ 85ರಿಂದ 100ರಷ್ಟು ಅಭ್ಯರ್ಥಿಗಳು ನೇಮಕಗೊಳ್ಳುತ್ತಾರೆ. ಆದರೆ, ನಮ್ಮ ರಾಜ್ಯದಲ್ಲಿ ಶೇ 20ರಷ್ಟು ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತಾರೆ. ಐಬಿಪಿಎಸ್ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಪ್ರಾದೇಶಿಕ ಹಾಗೂ ಸ್ಥಳೀಯ ಭಾಷಿಗರಿಗೆ ಮೊದಲ ಪ್ರಾಶಸ್ತ್ಯ ನೀಡಬೇಕೆಂಬ ನಿಯಮವಿದೆ. ಆದರೆ ಈ ನಿಯಮ ಪಾಲನೆ ಆಗುತ್ತಿಲ್ಲ,, ಜೊತೆಗೆ ಮೊದಲು ಇದ್ದ ನಿಯಮವನ್ನು ತಿದ್ದುಪಡಿ ಮಾಡಿ ಬ್ಯಾಂಕಿಂಗ್ ಪರೀಕ್ಷೆಯನ್ನು ಕೇವಲ ಕನ್ನಡ ಅಥವಾ ಇಂಗ್ಲಿಷ್ ನಲ್ಲಿ ಬರೆಯಬೇಕು ಎಂಬ ನಿಯಮವನ್ನು 2014ರಲ್ಲಿ ಜಾರಿಗೊಳಿಸಲಾಗಿದೆ..

ಕರ್ನಾಟಕದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡಿಗರ ಉದ್ಯೋಗಾವಕಾಶಕ್ಕೆ ಆದ್ಯತೆ ನೀಡಬೇಕೆಂಬ ಕುರಿತಂತೆ ಕರ್ನಾಟಕದಾದ್ಯಂತ ಕನ್ನಡಪರ ಸಂಘಟನೆಗಳು ಹೋರಾಟಕ್ಕಿಳಿದು ವರ್ಷಗಳೇ ಕಳೆದಿವೆ.ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳನ್ನು ನೀಡುತ್ತಿಲ್ಲ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗಿಂತ ಹೊರ ರಾಜ್ಯದವರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತದೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top