ಗುರುವಾರದಿಂದ) ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನಕ್ಕೆ ಖಾಸಗಿ ಟಿವಿ ವಾಹಿನಿಗಳ ಕ್ಯಾಮರಾಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ. ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ರಾಜ್ಯ ಸರಕಾರದ ಈ ನಿರ್ಧಾರ ವ್ಯಾಪಕ ಟೀಕೆಗೆ ಗುರಿಯಾಗಿದೆ. ಹಲವು ವರ್ಷಗಳಿಂದ ನಡೆಯುತ್ತಿದ್ದ ಚಿಂತನೆ ಕೊನೆಗೂ ಕಾರ್ಯರೂಪಕ್ಕೆ ಬಂದಿದೆ. ಆಡಳಿತರೂಢ ಬಿಜೆಪಿ ಸರಕಾರ ಅಧಿವೇಶನದ ವೇಳೆ ದೃಶ್ಯ ಮಾಧ್ಯಮ ಮತ್ತು ಮುದ್ರಣ ಮಾಧ್ಯಮಗಳ ಕ್ಯಾಮರಾಗಳಿಗೆ ನಿರ್ಬಂಧ ಹೇರುವ ವಿವಾದಾತ್ಮಕ ತೀರ್ಮಾನ ತೆಗೆದುಕೊಂಡಿದೆ.
ನೂತನ ನಿಯಮದಲ್ಲಿ ದಿನಪತ್ರಿಕೆ ಹಾಗೂ ಟಿವಿ ವಾಹಿನಿ ವರದಿಗಾರರಿಗೆ ಮಾತ್ರ ವಿಧಾನಸಭೆಯೊಳಗೆ ಪ್ರವೇಶ ನೀಡಲಾಗಿದೆ. ವಾರಪತ್ರಿಕೆ, ಪಾಕ್ಷಿಕ ಹಾಗೂ ಮಾಸಿಕ ಪತ್ರಿಕೆಗಳ ಪ್ರತಿನಿಧಿಗಳಿಗೆ ಗ್ಯಾಲರಿಯಲ್ಲಿಅವಕಾಶ ಕಲ್ಪಿಸಲಾಗುತ್ತಿದೆ.
ಹೀಗಾಗಿ ವಿಧಾನ ಮಂಡಲ ಅಧಿವೇಶನದಲ್ಲಿ ಈ ಎಲ್ಲಾ ವಿಚಾರಗಳನ್ನೂ ಮುಂದಿಟ್ಟು ಪ್ರಶ್ನೆಗಳನ್ನು ಹೆಣೆದು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ರಣತಂತ್ರ ಹೆಣೆಯುತ್ತಿವೆ. ಇವೆಲ್ಲಾ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾದರೆ, ಸರ್ಕಾರದ ವರ್ಚಸ್ಸಿಗೆ ಮತ್ತಷ್ಟು ದಕ್ಕೆಯಾಗಲಿದೆ ಎಂಬುದು ಬಿಜೆಪಿ ಲೆಕ್ಕಾಚಾರ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿವೆ.
ಇನ್ನು ಸರ್ಕಾರದ ಈ ನಿರ್ಧಾರವು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗೆ ಕಾರಣವಾಗಿದ್ದು ಡಿಸಿಎಂ ಲಕ್ಷಣ್ ಸವದಿ ಅವರನ್ನು ಟ್ರೋಲ್ ಮಾಡಿದ್ದಾರೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಸಚಿವರಾಗಿದ್ದ ಲಕ್ಷ್ಮಣ ಸವದಿ, ಸಿ.ಸಿ.ಪಾಟೀಲ ಇತರರು ವಿಧಾನಸಭೆ ಕಲಾಪದ ಸಮಯದಲ್ಲಿ ಮೊಬೈಲ್‌ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸುತ್ತಿದ್ದ ದೃಶ್ಯವನ್ನು ಮಾಧ್ಯಮಗಳು ಸೆರೆಹಿಡಿದಿದ್ದವು. ಇದು ದೇಶಾದ್ಯಾದ್ಯಂತ ಸುದ್ದಿಯಾಗಿ ಬಿಜೆಪಿಗೆ ಮುಜುಗರ ಉಂಟಾಗಿತ್ತು.
“ಸದನದಲ್ಲಿ ನೀಲಿ ಚಿತ್ರ ನೋಡಿದ್ದ ತಮ್ಮ ಶಾಸಕರ ಭೂತ ಕಾಲದ ಇತಿಹಾಸವನ್ನು ಮನಗಂಡಿರುವ ಬಿಜೆಪಿ ಸರ್ಕಾರ ಸದನದಲ್ಲಿ ದೃಶ್ಯ ಮಾಧ್ಯಮಗಳಿಗೆ ಶಾಶ್ವತ ನಿಷೇಧ ಹೇರಲು ಮುಂದಾಗಿದೆ.” ಎಂದು ನಾಗರೀಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
