fbpx
ಸಮಾಚಾರ

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಪತ್ನಿ ವಿಧಿವಶ

ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್.ದೊರೆಸ್ವಾಮಿ ಅವರ ಪತ್ನಿ ಲಲಿತಮ್ಮ (90) ಇಂದು ಮುಂಜಾನೆ (ಡಿ.17) ಜಯದೇವ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಲಲಿತಮ್ಮ ಅವರಿಗೆ ಪತಿ ದೊರೆಸ್ವಾಮಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.

ಕಳೆದ 2 ದಿನಗಳಿಂದ ಆಸ್ಪತ್ರೆಯಲ್ಲಿದ್ದ ಲಲಿತಮ್ಮ ಅವರಿಗೆ ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.ಹೃದಯಾಘಾತ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ. ಇದೀಗ ಜಯನಗರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಬ್ಬರು ಮಕ್ಕಳನ್ನ ಲಲಿತಮ್ಮ ಅಗಲಿದ್ದಾರೆ.

ಇನ್ನು ಲಲಿತಮ್ಮ ಅವರ ಮೃತ ದೇಹವನ್ನ ಕಿಮ್ಸ್ ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top