fbpx
ಸಮಾಚಾರ

ಹಿರಿಯ ನಟಿ ಶೃತಿ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ: ಸಾವಿನ ಸುತ್ತ ಅನುಮಾನದ ಹುತ್ತ!

ಸ್ಯಾಂಡಲ್​ವುಡ್​ನ ಹಿರಿಯ ನಟಿ ಶೃತಿ ಅವರ ಕಾರು ಚಾಲಕನಾಗಿದ್ದ ಮಂಜುನಾಥ್​ ಸಿಂಗ್​ (25) ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಮಾಚೋನಹಳ್ಳಿ ಗ್ರಾಮದ ಬಳಿ ನಡೆದಿದೆ.

ಮಾಗಡಿ ರಸ್ತೆಯ ಫಾರೆಸ್ಟ್​ ಗೇಟ್​ ಸಮೀಪದಲ್ಲಿದ್ದ ಮರವೊಂದಕ್ಕೆ ನೇಣು ಹಾಕಿಕೊಂಡಿರುವ ಮಂಜುನಾಥ್​ ಸಿಂಗ್ ನಟಿ ಶೃತಿ ಮತ್ತು ನಟ ಶರಣ್​ಗೆ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮಂಜುನಾಥ್ ಚಿಕ್ಕಮಗಳೂರು ಜಿಲ್ಲೆಯ ಬೆಳವಾಡಿ ಗ್ರಾಮದವರು. ಅನೇಕ ವರ್ಷಗಳಿಂದ ಶ್ರುತಿ ಮತ್ತು ಶರಣ್ ಅವರಿಗೆ ಕಾರು ಚಾಲಕರಾಗಿದ್ದ ಮಂಜುನಾಥ್, ಕಳೆದ ಆರು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು ಎಂದು ಹೇಳಲಾಗುತ್ತಿದೆ.

ಆತ್ಮಹತ್ಯೆಯ ಹಿಂದಿನ ರಾತ್ರಿ ಕಡಬಗೆರೆಯಲ್ಲಿ ಸ್ನೇಹಿತರೊಂದಿಗೆ ಮಂಜುನಾಥ್​ ಪಾರ್ಟಿ ಮಾಡಿದ್ದರು ಎನ್ನಲಾಗಿದ್ದು ಅವರ ಸಾವಿನ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಮದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಮಂಜುನಾಥ್ ಸಿಂಗ ಬಾವ ದೀಪಕ್ ಸಿಂಗ್ ಮಾತನಾಡಿ ಮಂಜುನಾಥ್ ಸಾಯುವ ವ್ಯಕ್ತಿಯಲ್ಲ, ಪೊಲೀಸರಿಂದ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top