fbpx
ಸಮಾಚಾರ

ರಿಸರ್ವ್‌ ಬ್ಯಾಂಕ್‌ ನೇಮಕಾತಿ: 926 ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ!

ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ದೇಶದಾದ್ಯಂತದ ಹಲವು ಕಚೇರಿಗಳಲ್ಲಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು, ಅರ್ಹ ಭಾರತೀಯ ಪ್ರಜೆಗಳಿಂದ ಆನ್‌ಲೈನ್‌ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ ಮತ್ತು ಇತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು, ಅರ್ಜಿ ಸಲ್ಲಿಸಿ.

ಆರ್‌ಬಿಐ 926 ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು. 23/12/2019 ರಿಂದ 16/1/2020ರ ತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (1 ಡಿಸೆಂಬರ್ 2019ಕ್ಕೆ ಅನ್ವಯವಾಗುವಂತೆ).

ವಿದ್ಯಾರ್ಹತೆ:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ ಶೇ.50 ಅಂಕಗಳೊಂದಿಗೆ ಯಾವುದೇ ಪದವಿಯಲ್ಲಿ ತೇರ್ಗಡೆ ಆಗಿರಬೇಕು. (ಎಸ್‌ಸಿ, ಎಸ್‌ಟಿ, ವಿಕಲಚೇತನ ಅಭ್ಯರ್ಥಿಗಳು ಜಸ್ಟ್‌ ಪಾಸ್‌ ಅಂಕಗಳನ್ನು ಪಡೆದಿದ್ದರೂ ಅರ್ಜಿ ಸಲ್ಲಿಸಬಹುದು). ಅಭ್ಯರ್ಥಿಗಳು ಯಾವ ಪ್ರಾದೇಶಿಕ ಕೇಂದ್ರದಲ್ಲಿ ನೇಮಕಾತಿ ಬಯಸುತ್ತಾರೋ, ಅಲ್ಲಿನ ಪ್ರಾದೇಶಿಕ ಭಾಷೆಯನ್ನು ಓದಲು, ಬರೆಯಲು, ಅರ್ಥಮಾಡಿಕೊಳ್ಳಲು, ಮಾತನಾಡಲು ಗೊತ್ತಿರಬೇಕು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಭಾಷಾ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ನೀಡಲಾಗುವ ವೇತನವೆಷ್ಟು ?:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಒಟ್ಟಾರೆ 36,091/ ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿಗಳನ್ನು ಸಲ್ಲಿಸುವ ಎಸ್‌ಸಿ/ಎಸ್‌ಟಿ/ವಿಕಲಚೇತನ/ನಿವೃತ್ತ ಯೋಧರಿಗೆ ರೂ. 50, ಓಬಿಸಿ/ಸಾಮಾನ್ಯ ಅಭ್ಯರ್ಥಿಗಳಿಗೆ 450 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಆನ್‌ಲೈನ್‌ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top