ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ ಭರ್ಜರಿ ಗೆಲುವು ಸಾಧಿಸಿ, ಸರಣಿಯನ್ನು ಕೈವಶ ಮಾಡಿಕೊಂಡಿತ್ತು. ಇದೀಗ ಬಿಬಿಎಂಪಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್ಸಿಎ)ಗೆ 50 ಸಾವಿರ ರುಪಾಯಿ ದಂಡ ವಿಧಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕೆಎಸ್ಸಿಎಗೆ 50 ಸಾವಿರ ರೂ. ದಂಡ ವಿಧಿಸಿದೆ. ಪ್ಲಾಸ್ಟಿಕ್ ಕಪ್, ಬ್ಯಾನರ್ ಬಳಸಿರುವುದಕ್ಕೆ ಆರೋಗ್ಯಾಧಿಕಾರಿಯಿಂದ ತಪಾಸಣೆ ನಡೆಸಲಾಗಿದೆ. ಈ ವೇಳೆ ಭಾರೀ ಪ್ರಮಾಣದ ಪ್ಲಾಸ್ಟಿಕ್ ಬಳಕೆ ಕಂಡು ಬಂದಿದ್ದು, ಮತ್ತೆ ಮರುಕಳಿಸದಂತೆ ಸೂಚನೆ ನೀಡಿದೆ.
Just not #Cricket ! Despite many awareness meetings, #BBMP has found that single-use plastic cups were used during yesterday’s cricket match & has fined #KSCA Rs 50,000 as penalty.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಹಿನ್ನೆಲೆ ರೂ 50000 ದಂಡ ವಿಧಿಸಲಾಗಿದೆ pic.twitter.com/aIymkJj8dH
— B.H.Anil Kumar,IAS (@BBMPCOMM) January 20, 2020
ಬಿಬಿಎಂಪಿಯ ಪೂರ್ವ ವಲಯದ ಉಪ ಆರೋಗ್ಯಾಧಿಕಾರಿ ಅವರು ದಂಡದ ನೋಟಿಸ್ ಅನ್ನು ಕ್ರೀಡಾಂಗಣದ ವ್ಯವಸ್ಥಾಪಕರಿಗೆ ಸೋಮವಾರ ತಲುಪಿಸಿದ್ದಾರೆ. ಈ ನೋಟಿಸ್ನ ಛಾಯಾಚಿತ್ರವನ್ನು ಪಾಲಿಕೆ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಭಾನುವಾರ ನಡೆದ ಕ್ರಿಕೆಟ್ ಪಂದ್ಯದ ವೇಳೆ ಉಪ ಆರೋಗ್ಯಾಧಿಕಾರಿ ತಪಾಸಣೆ ಮಾಡಿದಾಗ ಕ್ರೀಡಾಂಗಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ಕಪ್ ಹಾಗೂ ಫ್ಲೆಕ್ಸ್ ಬ್ಯಾನರ್ ಬಳಸಿದ್ದು ಕಂಡುಬಂದಿತ್ತು. ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಕಪ್ ಹಾಗೂ ಫ್ಲೆಕ್ಸ್ ಬ್ಯಾನರ್ಗಳನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಆರೋಗ್ಯ ವಿಭಾಗದಿಂದ ಹಲವಾರು ಬಾರಿ ತಿಳಿವಳಿಕೆ ನಿಡಲಾಗಿದೆ. ಆದರೂ ಕ್ರೀಡಾಂಗಣದ ಮಳಿಗೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಸಲಾಗಿತ್ತು. ಹಾಗಾಗಿ ₹ 50 ಸಾವಿರ ದಂಡ ವಿಧಿಸಲಾಗಿದೆ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
