fbpx
ಸಮಾಚಾರ

ಗದ್ದುಗೆಯಲ್ಲಿ ಶಿವಕುಮಾರ ಶ್ರೀಗಳ 50KGಯ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ!

ತುಮಕೂರು ಸಿದ್ಧಗಂಗಾ ಮಠದಲ್ಲಿ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯಲ್ಲಿ ಶ್ರೀಗಳ ಬೆಳ್ಳಿಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು.

ಬೆಳ್ಳಿಯ ಮೂರ್ತಿಯನ್ನು ಹೂಗಳಿಂದ ಸುಂದರವಾಗಿ ಅಲಂಕರಿಸಲಾಗಿತ್ತು. ಮಠಾಧೀಶರೆಲ್ಲರೂ ಸೇರಿ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ. ಶ್ರೀಗಳ ಗದ್ದುಗೆ ಅಲಂಕಾರದಿಂದ ಕಂಗೊಳಿಸುತ್ತಿದ್ದು, ಈ ವಿಶೇಷ ಸಂದರ್ಭಕ್ಕೆ ಭಕ್ತರು ಸಾಕ್ಷಿಯಾದರು. ಪ್ರತಿಮೆ ಮೂರಡಿ ಎತ್ತರವಿದ್ದು, ಸುಮಾರು 50 ಕೆಜಿ ಭಾರವಿದೆ.

ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಗದ್ದುಗೆ ಪೀಠವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಪೀಠದ ಕೆಳಭಾಗದಲ್ಲಿ ಶ್ರೀಗಳ ಪಾದುಕೆ, ಸ್ವಲ್ಪ ಮೇಲ್ಭಾಗದಲ್ಲಿ ಶಿವಲಿಂಗ ಈಗಾಗಲೇ ಪ್ರತಿಷ್ಠಾಪನೆ ಮಾಡಲಾಗಿತ್ತು. ಶಿವಲಿಂಗದ ಹಿಂಭಾಗದ ಮೇಲ್ಭಾಗದಲ್ಲಿ ಶ್ರೀಗಳ ಭಾವಚಿತ್ರ ಇರಿಸಲಾಗಿತ್ತು. ಈ ಭಾವ ಚಿತ್ರ ತೆರವುಗೊಳಿಸಿ ಅದರ ಜಾಗದಲ್ಲಿ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top