fbpx
ಸಮಾಚಾರ

ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋಟ- ಶಾಸಕ ಹ್ಯಾರಿಸ್ ಕಾಲಿಗೆ ಗಾಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣ ಇಡೀ ರಾಜ್ಯ ಹಾಗೂ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕಾಂಗ್ರೆಸ್ ಶಾಸಕ ಹ್ಯಾರಿಸ್ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಹಂದಿಯನ್ನು ಹೊಡೆಯಲು ಬಳಸುವ ಮದ್ದು ಸ್ಫೋಟಗೊಂಡಿದೆ ಎಂಬ ಮಾಹಿತಿ ಪ್ರಾಥಮಿಕ ತನಿಖೆ ವೇಳೆ ಲಭ್ಯವಾಗಿದೆ.

ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಪಾಲ್ಗೊಂಡಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ತಕ್ಷಣ ಶಾಸಕರು ಸೇರಿದಂತೆ ಗಾಯಗೊಂಡವರನ್ನು ಸೈಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವೇಕನಗರದಲ್ಲಿ ಹುಟ್ಟುಹಬ್ಬದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಹಾರಿಸ್ ಅವರು ವೇದಿಕೆಯಲ್ಲಿ ಕುಳಿತಿದ್ದರು. ಈ ವೇಳೆ ವಸ್ತುವೊಂದು ಬಂದು ಅಪ್ಪಳಿಸಿ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ “ನಮ್ಮ ತಂದೆಯನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿ ಕಾರ್ಯಕ್ರಮದಲ್ಲಿ ಕೆಲವು ದುಷ್ಕೃತ್ಯ ಎಸಗಿದ್ದಾರೆ. ಇದು ಖಂಡಿತವಾಗಿಯೂ ಪಟಾಕಿಯಿಂದಾಗಿ ಸಂಭವಿಸಿದ ಸ್ಫೋಟವಲ್ಲ. ಕಚ್ಚಾ ಬಾಂಬ್ ಬಳಕೆಯಾಗಿರುವ ಅನುಮಾನವಿದೆ” ಎಂದು ಆಸೋಪಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top