fbpx
ಸಮಾಚಾರ

ರಾಜ್ಯ ಸರ್ಕಾರದಿಂದ ‘ಆಶಾದೀಪ ಯೋಜನೆ’ ಜಾರಿ: ಇದರಿಂದ ಯಾರಿಗೆ ಏನು ಲಾಭ? ಇಲ್ಲಿದೆ ಸಂಪೂರ್ಣ ಮಾಹಿತಿ!

ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಆದರೆ ಖಾಸಗಿ ವಲಯದ ವಲಯದ ಸಂಸ್ಥೆಗಳ ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆ ಅವಕಾಶ ಇರುವುದಿಲ್ಲ. ಈ ನ್ಯೂನತೆಯನ್ನು ಸರಿಪಡಿಸಲು ಹಾಗೂ ಈ ವರ್ಗದ ಯುವಕರಿಗೆ ಸಾಮಾಜಿಕ ನ್ಯಾಯ ಒದಗಿಸುವ ದೃಷ್ಟಿಯಿಂದ “ಆಶಾದೀಪ” ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ರಾಜ್ಯಸರ್ಕಾರ ಜಾರಿಗೆ ತಂದಿದೆ.

ಖಾಸಗಿ ವಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಉದ್ಯೋಗದಾತರನ್ನು ಉತ್ತೇಜಿಸಲು ಸರ್ಕಾರ ‘ಆಶಾದೀಪ’ ಎಂಬ ನೂತನ ಯೋಜನೆಯನ್ನು ರೂಪಿಸಿದ್ದು ಈ ಯೋಜನೆಯನ್ನು ಕರ್ನಾಟಕ ರಾಜ್ಯ ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೊಸೈಟಿಯ ರಾಜ್ಯ ಸರ್ಕಾರ ಜಾರಿಗೆ ತಂದಿದೆ.

ಈ ಯೋಜನೆಯಡಿ ಪ್ರಪ್ರಥಮವಾಗಿ ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಸೇರಿದವರನ್ನು ಖಾಯಂ ಕೆಲಸಗಾರರಾಗಿ ನೇಮಿಸಿಕೊಳ್ಳುವ ಮಾಲೀಕರ ಪಾಲಿನ ಭವಿಷ್ಯ ನಿಧಿ ವಂತಿಕೆ ಹಾಗೂ ಕಾರ್ಮಿಕರ ರಾಜ್ಯ ವಿಮಾ (ಇ.ಎಸ್.ಐ) ವಂತಿಕೆಯನ್ನು ನೇಮಕ ಮಾಡಿದ ಮೊದಲ 2 (ಎರಡು) ವರ್ಷಗಳವರೆಗೆ ಹಾಗೂ ಗುತ್ತಿಗೆ ಕಾರ್ಮಿಕರಾಗಿ ನೇಮಿಸಿಕೊಂಡಲ್ಲಿ, 1 (ಒಂದು) ವರ್ಷದವರೆಗೆ ಮರು ಪಾವತಿಸುವ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಖಾಸಗಿ ವಲಯದ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ/ಪಂಗಡದವರಿಗೆ ಉದ್ಯೋಗ ದೊರಕಿಸಿಕೊಡುವುದು, ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ ಹಾಗೂ ಆರ್ಥಿಕ ಜೀವನಮಟ್ಟವನ್ನು ಸುಧಾರಿಸುವುದು, ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಂಡ ಸಂಸ್ಥೆಗಳಿಗೆ ಅಂತಹ ನೌಕರರ ಇ.ಎಸ್.ಐ ಹಾಗೂ ಪಿ.ಎಫ್ ವಂತಿಕೆಯನ್ನು ಮರು ಪಾವತಿಸುವ ಮೂಲಕ ಆರ್ಥಿಕ ಸಹಾಯ ನೀಡುವುದು ಹಾಗೂ ತರಬೇತಿ ಪಡೆಯುವ ಅಪ್ರೆಂಟಿಸ್ ಗಳಿಗೆ ಶಿಷ್ಯ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.

ಹೆಚ್ಚಿನ ಮಾಹಿತಿಗೆ ರಾಜ್ಯ ಸರ್ಕಾರ ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ (ಆಶಾದೀಪ ಯೋಜನೆ) ಸೊಸೈಟಿ ಅಥವಾ ದೂರವಾಣಿ ಸಂಖ್ಯೆ 080-29759983/8833, ಅಥವಾ ಕೆಳಗೆ ತಿಳಿಸಿರುವ ಫೇಸ್ಬುಕ್ ಮತ್ತು ಟ್ವಿಟ್ಟರ್ ಖಾತೆಗಳಲ್ಲೂ ಆಶಾದೀಪ ಯೋಜನೆಯ ಬಗ್ಗೆ ಮಾಹಿತಿಯನ್ನು ಪಡೆಯಬಹುದು.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top