fbpx
ಸಮಾಚಾರ

ಪ್ರಧಾನಿ ಮೋದಿಯನ್ನು ಅವಮಾನಿಸಿ ಮಕ್ಕಳಿಂದ ನಾಟಕ ಪ್ರದರ್ಶನ: ಬೀದರ್ ಶಾಲೆ ಮೇಲೆ ಬಿಟ್ಟು ಕೇಸ್!

ಪ್ರಧಾನಿ ನರೇಂದ್ರ ಮೋದಿ ಅವಮಾನಿಸಿದ ಕಾರಣಕ್ಕೆ ಬೀದರ್‌ನ ಶಿಕ್ಷಣ ಸಂಸ್ಥೆ ಮೇಲೆ ಕೇಸು ದಾಖಲು ಮಾಡಲಾಗಿದೆ. ನಾಟಕವೊಂದರ ಸಂಭಾಷಣೆಯಲ್ಲಿ ಮೋದಿಯನ್ನು ಅವಮಾನಿಸಲಾಗಿತ್ತು. ದೇಶದ್ರೋಹ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

ನಾಟಕದಲ್ಲಿ ಪ್ರಧಾನಿ ಮೋದಿಯವರನ್ನು ಅವಮಾನಿಸಿದ್ದಾರೆಂದು ಸಾಮಾಜಿಕ ಕಾರ್ಯಕರ್ತ ನೀಲೇಶ್ ರಕ್ಷ್ಯಾಲ್ ಅವರು ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಾಟಕದಲ್ಲಿ ಪೌರತ್ವ ಕಾಯ್ದೆಯಿಂದ ಒಂದು ಸಮುದಾಯ ದೇಶವನ್ನು ಬೇಕು ಎಂಬ ಸಂದೇಶವನ್ನು ತಿಳಿಸಲಾಗಿದೆ. ಈ ನಾಟಕದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದ್ದು, ವಿಡಿಯೋ ವೈರಲ್ ಆಗಿದೆ.

‘ಸಿಎಎ, ಎನ್‌ಪಿಆರ್ ಹಾಗೂ ಎನ್‌ಆರ್‌ಸಿ ಜಾರಿಗೆ ಬಂದರೆ ಮುಸ್ಲಿಮರು ದೇಶ ಬಿಟ್ಟು ಹೋಗಬೇಕಾಗುತ್ತದೆ ಎನ್ನುವ ಹೇಳಿಕೆ ಜನವರಿ 21ರಂದು ಮಧ್ಯಾಹ್ನ 3ಕ್ಕೆ ಗಂಟೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡಲಾಗಿದೆ. ಈ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಲಾಗಿದೆ’ ಎಂದು ದೂರಿನಲ್ಲಿ ಬರೆಯಲಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಾಹೀನ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್‌ ಖದೀರ್‌ ‘ಹತ್ತು ದಿನಗಳಿಂದ ಬೀದರ್‌ನಲ್ಲಿ ಇಲ್ಲ. ಶಿಕ್ಷಣ ಸಂಸ್ಥೆಯ ಕಾರ್ಯ ನಿಮಿತ್ತ ದೆಹಲಿಗೆ ಬಂದಿರುವೆ. ಶಾಲೆಯಲ್ಲಿ ಮಕ್ಕಳಿಂದ ನಾಟಕವಾಡಿಸಿದ ಹಾಗೂ ನಮ್ಮ ಸಂಸ್ಥೆಯ ವಿರುದ್ಧ ದೂರು ದಾಖಲಾಗಿರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಒಂದು ವೇಳೆ ನಮ್ಮ ಸಂಸ್ಥೆಯ ಸಿಬ್ಬಂದಿಯಿಂದ ತಪ್ಪು ನಡೆದಿದ್ದರೆ, ಮುಲ್ಲಾಜಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top