fbpx
ಸಮಾಚಾರ

ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ನೇರ ನೇಮಕಾತಿ: ಅರ್ಜಿ ಹಾಕಿ

ಶಿವಮೊಗ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 69 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ದಿನಾಂಕ 16-01-2020ರಿಂದ ಅರ್ಜಿ ಸಲ್ಲಿಸಬಹುದು, ಅರ್ಜಿಗಳನ್ನು ಸಲ್ಲಿಸಲು 15/2/2020 ಕೊನೆಯ ದಿನವಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು.

ವಯೋಮಿತಿ:
ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್‌.ಇ ಅಥವಾ ಐ.ಸಿ.ಎಸ್‌.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕದ ವಿವರ
ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 100 ರೂ., ಇತರೆ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಎಸ್‌ಬಿಐ ಬ್ಯಾಂಕ್‌ನಲ್ಲಿ ಪಾವತಿ ಮಾಡಲು 17/2/2020 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವಿಕೆ:
ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶ ಇರುವುದಿಲ್ಲ. ಹೀಗಾಗಿ ಅರ್ಜಿಯನ್ನು Http://Shivamogga-Va.Kar.Nic.In/ ವೆಬ್‌ಸೈಟ್‌ನಲ್ಲಿ ದಿನಾಂಕ 17/2/2020ರೊಳಗೆ ಸಲ್ಲಿಸಲು ಕೋರಲಾಗಿದೆ.

ಹುದ್ದೆಗಳ ಇತರ ಮಾಹಿತಿಯನ್ನು ತಿಳಿದುಕೊಳ್ಳಲು ಇಲಾಖೆಯ ಅಧಿಕೃತ ವೆಬ್‌ಸೈಟ್ Http://Shivamogga-Va.Kar.Nic.In/ನಲ್ಲಿ ಪಡೆಯಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top