fbpx
ಸಮಾಚಾರ

ಸಿದ್ದಗಂಗಾ ಮಠ ಸೇರಿ ಹಲವು ಮಠಗಳ ವಿದ್ಯಾರ್ಥಿಗಳ ಊಟ ಕಿತ್ತುಕೊಂಡ ಬಿಎಸ್‌ವೈ ಸರ್ಕಾರ!

ಸಿದ್ದಗಂಗಾ ಮಠಕ್ಕೆ ರಾಜ್ಯ ಸರಕಾರದಿಂದ ಅಕ್ಕಿ ಹಾಗೂ ಗೋಧಿ ಪೂರೈಕೆಯನ್ನು ರದ್ದು ಮಾಡಲಾಗಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಮಾಡಿರುವ ಆರೋಪ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಮೂರು ತಿಂಗಳಿಂದ ಸಿದ್ದಗಂಗಾ ಮಠ ಸೇರಿದಂತೆ ಹಲವಾರು ಸಂಘಸಂಸ್ಥೆಗಳಿಗೆ ಅಕ್ಕಿ ಹಾಗೂ ಗೋಧಿ ಪೂರೈಕೆ ರದ್ದು ಮಾಡಲಾಗಿದೆ ಎಂದು ಖಾದರ್ ಆರೋಪಿಸಿದ್ದರು.

ತುಮಕೂರು ಸಿದ್ದಗಂಗಾ ಮಠದಲ್ಲಿ ಸಾಕಷ್ಟು ಜನರು ವಸತಿ ಪಡೆದು ಶಿಕ್ಷಣ ಪಡೆಯುತ್ತಿದ್ದಾರೆ. ಹೀಗಾಗಿ ಅಂತಹ ಶಿಕ್ಷಣ ಸಂಸ್ಥೆಗಳಿಗೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವಿವಿಧ ಸಂಘಗಳ ಸಹಭಾಗಿತ್ವದಲ್ಲಿ ಅಕ್ಕಿ, ಗೋಧಿ ವಿತರಿಸುತ್ತಿತ್ತು. ಇದರಿಂದ ಸಂಸ್ಥೆಗಳಿಗೆ ಹೆಚ್ಚು ಅನುಕೂಲವಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಏಕಾಏಕಿ ಸಿದ್ದಗಂಗಾ ಮಠ ಹಾಗೂ ವಿವಿಧ ಸಂಸ್ಥೆಗಳಿಗೆ ವಿತರಿಸುತ್ತಿದ್ದ ಅಕ್ಕಿ ಹಾಗೂ ಗೋಧಿಯನ್ನು ನಿಲ್ಲಿಸಿದೆ ಎಂದು ದೂರಿದರು.

ಇದೇ ವೇಳೆ ಬೀದರ್ ಶಾಹೀನ್ ಕಾಲೇಜ್ ಮೇಲೆ ದೇಶದ್ರೋಹ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿ, ಬಿಜೆಪಿ ಕಾರ್ಯದರ್ಶಿ ಹೇಳಿದರು ಅಂತ ಇಂತ ಕೆಲಸ ಮಾಡಿರುವುದು ಸರಿಯಲ್ಲ. ಪೊಲೀಸರು ದೇಶದ್ರೋಹ ಕೇಸ್ ಹಾಕಿದ್ದು ಹಾಗೂ ಮಕ್ಕಳು, ಶಿಕ್ಷಕರನ್ನು ವಿಚಾರಣೆಗೆ ಗುರಿಪಡಿಸಿದ್ದು ಸರಿಯಲ್ಲ. ತಪ್ಪು ಮಾಡಿದ್ದರೆ ಕ್ರಮ ತೆಗೆದುಕೊಳ್ಳಲಿ ಎಂದರು.

464 ಸಂಸ್ಥೆಗಳು, 41 ಸಾವಿರ ಫಲಾನುಭವಿಗಳಿಗೆ ಅನ್ನ ದಾಸೋಹದಡಿ ಕೊಡುವ ಅಕ್ಕಿ, ಗೋಧಿ ನಿಲ್ಲಿಸಲಾಗಿದೆ. ಸಿದ್ದಗಂಗಾ ಮಠದಲ್ಲಿ 7359 ವಿದ್ಯಾರ್ಥಿಗಳಿದ್ದಾರೆ. ಪ್ರತಿ ತಿಂಗಳು 73, 590 ಕೆ.ಜಿ ಅಕ್ಕಿ, 36,794 ಕೆ.ಜಿ. ಗೋಧಿ ಕೊಡಲಾಗುತ್ತಿತ್ತು. ದಾಸೋಹದ ಅಡಿ ಈ ಹಿಂದಿನ ಸರ್ಕಾರ ನೀಡುತ್ತಿತ್ತು ಎಂದರು.

ಇದೀಗ ಬಿಜೆಪಿ ಸರ್ಕಾರ ಕಳೆದ 3 ತಿಂಗಳ ಹಿಂದೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯಿಂದ ಈ ಯೋಜನೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಮತ್ತು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ದಾಖಲೆ ಸಮೇತ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top