fbpx
ಸಮಾಚಾರ

“ಆರ್ಥಿಕ ಸಮಸ್ಯೆ ಇರುವುದು ನಿಜ, ಆದರೆ ಸಿದ್ದರಾಮಯ್ಯ ಹೇಳುವಷ್ಟು ಇಲ್ಲ” ಡಿಸಿಎಂ ಕಾರಜೋಳ

ರಾಜ್ಯದಲ್ಲಿ ಆರ್ಥಿಕ ತೊಂದರೆ ಇರುವುದು ನಿಜವಾಗಿದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವ ತೊಂದರೆ ಇಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದರಿದ್ರತನ ಆರಂಭಗೊಂಡಿದ್ದೆ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ಎಂದು ಆರೋಪಿಸಿದರು.

ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಆರ್ಥಿಕ ತೊಂದರೆ ಇರುವುದು ನಿಜವಾಗಿದ್ದರೂ ಸಿದ್ದರಾಮಯ್ಯ ಹೇಳಿರುವ ಹೇಳಿಕೆಯಿಂದ ತೊಂದರೆ ಇಲ್ಲ. ದರಿದ್ರತನ ಆರಂಭಗೊಂಡಿದ್ದೇ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ಎಂದು ಆರೋಪಿಸಿದ ಅವರು, ಹೊಸ ಸಾಲ ತೆಗೆಯಲು ಬಾರದಷ್ಟು (ಬಾರೋಯಿಂಗ್ ಕೆಪ್ಯಾಸಿಟಿ ಮೀರಿ)ಸಾಲ ತೆಗೆದಿದ್ದಾರೆ.” ಎಂದು ಹೇಳಿದರು!

ಪ್ರಕೃತಿ ವಿಕೋಪ ಉಂಟಾಗಿ ಜನ ಮನೆಗಳು ಕಳೆದುಕೊಂಡಿದ್ದಾರೆ. ಬೆಳೆ ಹಾನಿ ಉಂಟಾಗಿದೆ. ಹಾಗಾಗಿ ಆರ್ಥಿಕ ತೊಂದರೆ ಆಗಿದೆ. ಸುಮಾರು 38 ಸಾವಿರ ಕೋಟಿ ರೂ. ನೆರೆ ಪರಿಹಾರಕ್ಕೆ ಖರ್ಚು ಮಾಡಲಾಗುತ್ತಿದೆ. ಪರಿಹಾರ ಹಂಚಿಕೆ, ರಸ್ತೆ, ಮನೆಗಳ ನಿರ್ಮಾಣಕ್ಕೆ ವೆಚ್ಚ ಮಾಡಲಾಗಿದೆ. ಹಾಗಾಗಿ ಆರ್ಥಿಕ ತೊಂದರೆ ಕಾಣಿಸಿಕೊಂಡಿದೆ ಎಂದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top