fbpx
ಸಮಾಚಾರ

ನಾಳೆ ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ!

ರಾಜ್ಯದಲ್ಲಿ ಸರೋಜಿನಿ ಮಹಿಷಿ ವರದಿ ಜಾರಿಯಾಗಲೇಬೇಕು ಎಂದು ಒತ್ತಾಯಿಸಿ ಸುಮಾರು 500 ಕನ್ನಡ ಪರ ಸಂಘಟನೆಗಳು ನಾಳೆ ರಾಜ್ಯ ವ್ಯಾಪಿ ಬಂದ್​ಗೆ ಕರೆ ನೀಡಿವೆ. ಈ ಬಂದ್​ಗೆ ಈಗಾಗಲೇ ಓಲಾ-ಊಬರ್ ಸೇರಿದಂತೆ ಅನೇಕ ಖಾಸಗಿ ಸಾರಿಗೆ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಅಲ್ಲದೆ, ಖಾಸಗಿ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಒಕ್ಕೂಟ ಸಹ ಈ ಪ್ರತಿಭಟನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿವೆ. ಹೀಗಾಗಿ ನಾಳಿನ ಕರ್ನಾಟಕ ಬಂದ್ ಯಶಸ್ವಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಲಾರಿ ಮಾಲೀಕರ ಸಂಘ, ಓಲಾ ಮತ್ತು ಊಬರ್ ಚಾಲಕರ ಸಂಘ, ಬೀದಿ ವ್ಯಾಪಾರಿಗಳು, ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘ, ಆದರ್ಶ ಆಟೋ ಯೂನಿಯನ್, ಪೀಸ್ ಆಟೋ ಯೂನಿಯನ್, ಜೈ ಭಾರತ ಚಾಲಕರ ಸಂಘ, ಸಾರಥಿ ಸೇನೆ ಸೇರಿದಂತೆ 600 ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ.

ಆಟೋಗಳ ಸಂಚಾರವಿಲ್ಲ ಆದರ್ಶ ಆಟೋ ಯೂನಿಯನ್, ಪೀಸ್ ಆಟೋ ಯೂನಿಯನ್ ಸೇರಿದಂತೆ ವಿವಿಧ ಆಟೋ ಚಾಲಕರ ಸಂಘಟನೆಗಳು ಬಂದ್‌ಗೆ ಬೆಂಬಲವನ್ನು ನೀಡಿವೆ. ಆದ್ದರಿಂದ, ಆಟೋಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಕೆಎಸ್ಆರ್‌ಟಿಸಿ, ಬಿಎಂಟಿಸಿ ನೌಕರರು ನೈತಿಕ ಬೆಂಬಲ ನೀಡಿದ್ದಾರೆ. ಬಸ್ ಸಂಚಾರವನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಕಲ್ಲು ತೂರಾಟದಂತಹ ಪ್ರಕರಣಗಳು ನಡೆದರೆ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಇನ್ನು ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಪರಿಸ್ಥಿತಿ ನೋಡಿಕೊಂಡು ರಜೆ ನೀಡುವ ಅಧಿಕಾರವನ್ನು ಡಿಡಿಪಿಐಗಳಿಗೆ ನೀಡುವ ಸಾಧ್ಯತೆ ಇದೆ.

. ಏನಿರುತ್ತೆ?
ತುರ್ತು ಚಿಕಿತ್ಸೆ, ಮೆಡಿಕಲ್ ಸ್ಟೋರ್, ಅಗತ್ಯ ವಸ್ತುಗಳಾದ ಪೇಪರ್, ಹಾಲು, ತರಕಾರಿ,ಸಾರಿಗೆ ಸೇವೆ, ಮೆಟ್ರೋ ಸಾಮಾನ್ಯವಾಗಿ ಬಂದ್ ಸಮಯದಲ್ಲಿ ಅಗತ್ಯ ವಸ್ತುಗಳಿಗೆ ಯಾವುದೇ ಅಡಚಣೆ ಇರುವುದಿಲ್ಲ. ಆಸ್ಪತ್ರೆಗಳು, ವೈದ್ಯಕೀಯ ಸೇವೆಗಳು, ಆಯಂಬುಲೆನ್ಸ್ ಸೇವೆಗಳು, ಔಷಧಿಗಳು, ಮೆಡಿಕಲ್ ಶಾಪ್ ಗಳು ತೆರೆದಿರುತ್ತವೆ. ಎಂದಿನಂತೆ ಹಾಲು ಮತ್ತು ದಿನಪತ್ರಿಗಳು ಲಭ್ಯ, ಇನ್ನಿತರೆ ತುರ್ತು ಸೇವೆಗಳು ಲಭ್ಯವಿರುತ್ತವೆ. . ನಮ್ಮ ಮೆಟ್ರೋ ಮತ್ತು ರೈಲು ಸೇವೆ ಎಂದಿನಂತೆ ಇರಲಿದೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top